ರಾಯಚೂರು: ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೊಳಿಸಲು ಪ್ರತಿಭಟನೆ

ರಾಯಚೂರು: ಸ್ವಾಮಿನಾಥನ್ ಆಯೋಗದ ಶಿಫಾರಸ್ಸಿನಂತೆ ಕನಿಷ್ಟ ಬೆಂಬಲ ಬೆಲೆಯನ್ನು ಖಾತ್ರಿ ಪಡಿಸಲು ಕಾನೂನು ಅಂಗೀಕರಿಸಬೇಕು ಎಂದು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರ ವಿವಾದಿತ ಮೂರು ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುವಾಗ ಸ್ವಾಮಿನಾಥನ್ ವರದಿ ಜಾರಿಗೊಳಿಸಿ ಕನಿಷ್ಠ ಬೆಂಬಲ ಕಾನೂನು ಜಾರಿಗೊಳಿಸುವುದಾಗಿ ಭರವಸೆ ನೀಡಿದರೂ ಈವರೆಗೆ ಈಡೇರಿಸಿಲ್ಲ. ಕೇಂದ್ರ ಸರ್ಕಾರ ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆದರೂ ರಾಜ್ಯ ಸರ್ಕಾರ ಹಿಂಪಡೆಯದೇ ಬಿಜೆಪಿ ಸರ್ಕಾರ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ದೂರಿದರು.
ಎಂಎಸ್‌ಪಿ ಕುರಿತಂತೆ ಕೇಂದ್ರ ಸರ್ಕಾರ ರಚಿಸಿರುವ ಸಮಿತಿ ಮತ್ತು ಅದರ ಹೇಳಿಕೆ ರೈತ ವಿರೋಧಿ ನೀತಿಯಾಗಿದೆ. ಕೂಡಲೇ ಸಮಿತಿಯನ್ನು ವಜಾಗೊಳಿಸಬೇಕು. ರೈತ ಕಿಸಾನ್ ಮೋರ್ಚಾದ ಪ್ರತಿನಿಧಿಗಳನ್ನು ಸೇರಿಸಿ ಹೊಸ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.
ಲಿಖ್ಖಿಂಪುರಿ ಜಿಲ್ಲೆಯ ಟಿಕೋನಿಯದಲ್ಲಿ ರೈತರ ಹಾಗೂ ಪತ್ರಕರ್ತರ ಹತ್ಯೆಯ ಆರೋಪಿ ಕೇಂದ್ರ ಸಚಿವ ಅಜಯ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಿ, ರೈತರ ಮೇಲೆ ಹಾಕಿರುವ ಸುಳ್ಳು ಪ್ರಕರಣ ಹಿಂಪಡೆಯಬೇಕು. ರೈತ ಚಳವಳಿಯಲ್ಲಿ ಹುತಾತ್ಮರಾದ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ಕೆ.ಜಿ ವೀರೇಶ, ಮುಖಂಡರಾದ ಈ ರಂಗನಗೌಡ, ಡಿ.ಎಸ್ ಶರಣಬಸವ, ರಮೇಶ ಯಾಪಲದಿನ್ನಿ, ಶ್ರೀನಿವಾಸ ಕಲವಲದೊಡ್ಡಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.