ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಪ್ರತಿಭಟನೆ

Published 19 ಏಪ್ರಿಲ್ 2024, 15:42 IST
Last Updated 19 ಏಪ್ರಿಲ್ 2024, 15:42 IST
ಅಕ್ಷರ ಗಾತ್ರ

ರಾಯಚೂರು: ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಲವ್‌ ಜಿಹಾದ್ ಹತ್ಯೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ, ನೇಹಾ ಹತ್ಯೆ ಖಂಡಿಸಿ ಘೋಷಣೆ ಕೂಗಿದರು. ಆರೋಪಿಗೆ ತಕ್ಕ ಶಿಕ್ಷೆಯನ್ನು ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. 

ಪ್ರೀತಿ ವಿಚಾರವಾಗಿ ನೇರಾ ಹಿರೇಮಠ ಅವರನ್ನು ಪೀಡಿಸುತ್ತಿಪ್ಪ. ಪ್ರೀತಿ ಮಾಡಲು ತಿರಸ್ಕರಿಸಿದ್ದಕ್ಕೆ, ಲವ್‌ ಜೀಹಾದ್‌ ಕೃತ್ಯಕ್ಕೆ ಮುಂದಾಗಿ ಕಾಲೇಜಿನಲ್ಲೇ ಚಾಕುವಿನಿಂದ ಇರಿದು  ಹತ್ಯೆ ಮಾಡಿರುವುದು ಇಡೀ ಸಮಾಜವೇ ತಲೆತಗ್ಗಿಸುವ ಸಂಗತಿಯಾಗಿದೆ. ಘಟನೆಯಿಂದಾಗಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಆತಂಕ್ಕೀಡಾಗಿದ್ದಾರೆ. ದೇಶದ ಕಾನೂನಿನ ಮೇಲೆ ಗೌರವ, ಭಯ-ಭೀತಿಯಿಲ್ಲದ ಆರೋಪಿ ಫಯಾಜ್ ಇಂತಹ ಕೃತ್ಯ ನಡೆಸಿ ಸಮುದಾಯ ಭೀತಿಗೊಳ್ಳುವಂತೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಈ ಕುರಿತು ಗಂಭೀರ ಚಿಂತನೆ ಮಾಡಬೇಕಾದ ಸರ್ಕಾರ ಯಾವುದೇ ರೀತಿಯ ಕ್ರಮ ಜರುಗಿಸುತ್ತಿಲ್ಲ ಎಂದು ದೂರಿದರು.

 ಈ ಕೂಡಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು. ಹತ್ಯೆಯ ಘಟನೆಯನ್ನು ಉನ್ನತ ಮಟ್ಟದ ತನಿಖೆಗೊಳಪಡಿಸಬೇಕು. ಅಗತ್ಯವಿದ್ದರೆ ಸಿಬಿಐಗೆ ವಹಿಸಬೇಕು. ಶಾಲಾ-ಕಾಲೇಜುಗಳಲ್ಲಿ ಬಿಗಿ ಭದ್ರತೆ ಕಲ್ಪಿಸಬೇಕು. ಪೊಲೀಸರು ಮಫ್ತಿಯನ್ನು ತಿರುಗಾಡಿ ಇಂತಹ ಕೃತ್ಯಗಳ ಮೇಲೆ ನಿಗಾವಹಿಸಿ, ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆ ಮುಖಂಡರಾದ ಪಾಂಡು ಮೊರೆ, ಮೋಹನ ಹೂಗಾರ, ರಂಗನಾಥ, ನಿಕೇತನ, ಭೀಮೇಶ, ನಿತೀನ್‌, ಸಾಗರ, ನವೀನ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT