ಭಾನುವಾರ, ಆಗಸ್ಟ್ 1, 2021
26 °C

ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಸೋಷಿಯಲಿಸ್ಟ್ ಸೆಂಟರ್ ಆಫ್ ಇಂಡಿಯಾ (ಎಸ್ ಯುಸಿಐ) ಹಾಗೂ ರೈತ ಕೃಷಿ ಕಾರ್ಮಿಕರ ಸಂಘಟನೆ (ಕೆಆರ್ ಎಸ್)ಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಭೂ ಸುಧಾರಣೆ ಕಾಯ್ದೆ ರೈತರ, ಕೃಷಿ ಕಾರ್ಮಿಕರಿಗೆ ಮರಣ ಶಾಸನವಾಗಿದೆ. ವ್ಯವಸಾಯ ಮಾಡಲು ಆಸಕ್ತರಿಗೆ ಭೂಮಿ ಖರೀದಿ ಮಾಡಲು ಅನುಕೂಲವಾಗಲು ತಿದ್ದುಪಡಿ ತರಲಾಗಿದೆ ಎಂದು ಸರ್ಕಾರ ಹೇಳಿದೆ. ಈಗಾಗಲೇ ಕೃಷಿ ಮಾಡುತ್ತಿರುವ ರೈತರು ಕೃಷಿ ಚಟುವಟಿಕೆಯಿಂದ ವಿಮುಖರಾಗುತ್ತಿರುವ ಬಗ್ಗೆ ಹಾಗೂ ಆತ್ಮಹತ್ಯೆಗೆ ಶರಣಾಗುತ್ತಿರುವ ಬಗ್ಗೆ ಪರಿಹಾರ ಹುಡುಕದೇ ಬದಲಾಗಿ ಕಾರ್ಪೋರೆಟ್ ಕಂಪನಿ ಗಳಿಗೆ, ಬಂಡವಾಳಶಾಹಿಗಳು, ಅಕ್ರಮವಾಗಿ ಹಣ ಗಳಿಸಿದವರಿಗೆ ಕೃಷಿ ಭೂಮಿ ಖರೀದಿಸಲು ಅವಕಾಶ ನೀಡಿದೆ ಎಂದು ಆರೋಪಿಸಿದರು.

ಕೊರೊನಾ ಲಾಕ್ ಡೌನ್ ಸಂದರ್ಭವನ್ನು ದುರುಪಯೋಗ ಪಡಿಸಿಕೊಂಡು ಸರ್ಕಾರ ಸುಗ್ರಿವಾಜ್ಞೆ ಮೂಲಕ ಎಪಿಎಂಸಿ, ಭೂ ಸುಧಾರಣಾ ತಿದ್ದುಪಡಿ ಹಾಗೂ ಇತರೆ ಜನವಿರೋಧಿ, ಕಾನೂನುಗಳನ್ನು ಜಾರಿಗೆ ತರಲು ಹೊರಟಿದೆ. ಕೂಡಲೇ ಕಾಯ್ದೆಗಳನ್ನು ಹಿಂಪಡೆಯಬೇಕು ಇಲ್ಲದೇ ಹೋದಲ್ಲಿ ರೈತ ಸಮುದಾಯವನ್ನು ಸಂಘಟಿಸಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಆರ್.ಕೆ.ಎಸ್ ಜಿಲ್ಲಾಧ್ಯಕ್ಷ ಎಂ.ರಾಮಣ್ಣ, ಎಸ್.ಯುಸಿಐ ಕಾರ್ಯದರ್ಶಿ ಚಂದ್ರ ಗಿರೀಶ, ವೀರೇಶ ಎನ್.ಎಸ್.ಪ್ರಮೋದ ಕುಮಾರ, ಚನ್ನಬಸವ ಜಾನೇಕಲ್, ಮಹೇಶ ಚೀಕಲಪರ್ವಿ, ಉಮಾ ಮಹೇಶ್ವರಿ, ಮಲ್ಲನಗೌಡ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.