ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ನಿಲಯಗಳ ಕಾರ್ಮಿಕರನ್ನು ಕೈಬಿಟ್ಟಿರುವುದಕ್ಕೆ ವಿರೋಧ

Last Updated 10 ಜೂನ್ 2019, 13:24 IST
ಅಕ್ಷರ ಗಾತ್ರ

ರಾಯಚೂರು: ವಸತಿ ನಿಲಯಗಳಲ್ಲಿ ದಿನಗೂಲಿ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರನ್ನು ಕೈಬಿಟ್ಟಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಕಾರ್ಮಿಕರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಹಲವು ವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರಿಗೆ ಯಾವುದೇ ನಿಯಮ ಪಾಲಿಸದೇ ಏಕಾಏಕಿ ಕೆಲಸದಿಂದ ತೆಗೆದು ಹಾಕುತ್ತಿರುವುದು ಖಂಡನೀಯವಾಗಿದ್ದು, ಕೆಲಸದಿಂದ ತೆಗೆದು ಹಾಕಿದ ಕೆಲಸಗಾರರನ್ನು ಪುನಃ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಅಡುಗೆ ಸಹಾಯಕರು, ಕಾವಲುಗಾರರಾಗಿ ಕೆಲಸ ಮಾಡುತ್ತಿರುವವರನ್ನು ಕೆಲಸದಿಂದ ತೆಗೆಯುವುದನ್ನು ನಿಲ್ಲಿಸಬೇಕು. ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಬೇಕು. ಬಾಕಿ ವೇತನ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಉಪನಿರ್ದೇಶಕ ಮೂಲಕ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಮನವಿ ಸಲ್ಲಿಸಿದರು.

ಶಂತರಾಜ, ನರಸಿಂಹಲು, ಈರಣ್ಣ, ನರಸಿಂಹ ಗದ್ದಾರ್, ಮಾರೆಪ್ಪ, ಲಕ್ಷ್ಮಿ, ನರಸಿಂಗಮ್ಮ, ಉರುಕುಂದಮ್ಮ, ಗಿರಿಜಮ್ಮ, ಬಾಬು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT