ಸೋಮವಾರ, ಅಕ್ಟೋಬರ್ 26, 2020
28 °C

ರಾಯಚೂರು: ದೀಪ ಹಿಡಿದು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಉತ್ತರ ಪ್ರದೇಶದ ಹಾಥರಸ್‌ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ, ಕೊಲೆ ಘಟನೆಯನ್ನು ಖಂಡಿಸಿ ಸಂವಿಧಾನ ಹಕ್ಕುಗಳ ರಕ್ಷಣಾ ನಾಗರಿಕ ವೇದಿಕೆಯ ಪದಾಧಿಕಾರಿಗಳು ಗುರುವಾರ ರಾತ್ರಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಮೇಣದ ದೀಪ ಬೆಳಗಿಸಿ ಪ್ರತಿಭಟನೆ ನಡೆಸಿದರು.

ಉತ್ತರ ಪ್ರದೇಶದಲ್ಲಿ ನಡೆದಿರುವ ಘಟನೆ ಅಮಾನವೀಯ. ಅಲ್ಲಿನ ಸರ್ಕಾರ ಅಸಂವಿಧಾನಿಕ, ಅಮಾನವೀಯ ಆಡಳಿತ ನಡೆಸುತ್ತಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಧ್ಯಮಗಳ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವೇದಿಕೆಯ ಪದಾಧಿಕಾರಿಗಳಾದ ರಾಘವೇಂದ್ರ ಕುಷ್ಟಗಿ, ಎಂ.ಆರ್. ಭೇರಿ, ಜಾಣ್ ವೆಸ್ಲಿ, ವಿದ್ಯಾಪಾಟೀಲ್, ಖಾಜಾ ಅಸ್ಲಂ ಪಾಶಾ, ಚನ್ನಬಸವ ಜಾನೇಕಲ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು