ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.19ರಂದು ಚಿತ್ರದುರ್ಗದಿಂದ ಬೆಂಗಳೂರಿಗೆ ಪಾದಯಾತ್ರೆ

Last Updated 28 ಡಿಸೆಂಬರ್ 2018, 11:59 IST
ಅಕ್ಷರ ಗಾತ್ರ

ರಾಯಚೂರು: ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧಕ್ಕೆ ಒತ್ತಾಯಿಸಿ ಜನವರಿ 19ರಂದು ಚಿತ್ರದುರ್ಗದಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಲಾಗುತ್ತದೆ ಎಂದು ಮದ್ಯ ನಿಷೇಧ ಆಂದೋಲನದ ಸಂಚಾಲಕಿ ವಿದ್ಯಾ ಪಾಟೀಲ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಲಾಗುತ್ತಿದ್ದು, ಬೆಳಗಾವಿ ಅಧಿವೇಶನದಲ್ಲಿಯೂ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಸರ್ಕಾರ ಅಬಕಾರಿ ಆದಾಯದ ಮೇಲೆ ಆಡಳಿತ ನಡೆಸುತ್ತಿದ್ದು, ಇದು ಗಾಂಧೀಜಿ ತತ್ವಗಳಿಗೆ ವಿರುದ್ಧವಾದ ನಡೆಯಾಗಿದೆ ಎಂದು ಆರೋಪಿಸಿದರು.

ಮದ್ಯದ ಪರಿಣಾಮದಿಂದ ಅದೇಷ್ಟೋ ಕುಟುಂಬಗಳ ಬೀದಿಪಾಲಾಗಿವೆ. ದೌರ್ಜನ್ಯಗಳು, ಕೌಟುಂಬಿಕ ಹಿಂಸೆಗಳಿಗೆ ಮದ್ಯಸೇವೆನೆ ಕಾರಣ ಎಂದು ವರದಿಗಳು ಹೇಳಿದರೂ, ಮದ್ಯ ನಿಷೇಧ ಮಾಡಲು ಸರ್ಕಾರಗಳು ಮುಂದಾಗುತ್ತಿಲ್ಲ ಎಂದು ದೂರಿದರು.

ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಮಸ್ಕಿಗೆ ಬಂದಿದ್ದ ಕುಮಾರಸ್ವಾಮಿ ಮದ್ಯ ನಿಷೇಧ ಮಾಡುವ ಭರವಸೆ ನೀಡಿದ್ದರು. ಆದರೆ ಅಧಿಕಾರಕ್ಕೆ ಬಂದ ಮೇಲೆ ಮಾತು ಬದಲಿಸಿದ್ದಾರೆ. ಆದ್ದರಿಂದ ಸರ್ಕಾರದ ಮೇಲೆ ಒತ್ತಡ ತರಲು ಜನವರಿ 30ರಂದು ವಿಧಾನಸೌಧ ಮುತ್ತಿಗೆ ಹಾಕಲಾಗುತ್ತದೆ ಎಂದರು.

12 ದಿನಗಳ ಪಾದಯಾತ್ರೆಯಲ್ಲಿ ವಿವಿಧ ಮಠಾಧೀಶರು, ಸಂಘಟನೆಗಳ ಪದಾಧಿಕಾರಿಗಳು, ಸ್ವಾತಂತ್ರ್ಯ ಹೋರಾಟಗಾರರು, ಕಲಾವಿದರು, ಸಾಹಿತಿಗಳು, ಪ್ರಗತಿಪರರು ಭಾಗವಹಿಸಲಿದ್ದಾರೆ. ಮದ್ಯ ನಿಷೇಧ ಮಾಡದಿದ್ದರೆ ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರು ತಮ್ಮ ಶಕ್ತಿ ತೋರಿಸಲಿದ್ದಾರೆ ಎಂದು ಎಚ್ಚರಿಸಿದರು.

ರೇಣುಕಾ, ನರಸಮ್ಮ, ವೀರಮ್ಮ, ಮರಿಯಮ್ಮ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT