ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರ ಕಾರ್ಮಿಕರಿಂದ ಪ್ರತಿಭಟನೆ

Last Updated 4 ನವೆಂಬರ್ 2020, 14:22 IST
ಅಕ್ಷರ ಗಾತ್ರ

ರಾಯಚೂರು: 10 ಏಪ್ರಿಲ್ 2017ರ ರಂದು ಸುಪ್ರೀಂಕೋರ್ಟ್ ಆದೇಶದಂತೆ ದಿನಗೂಲಿ ನೌಕರರ ಸೇವಾ ಸಕ್ರಮಾತಿ ಹೆಸರಿನಲ್ಲಿ ಜಿಲ್ಲಾಧಿಕಾರಿ ಅಕ್ರಮ ನೇಮಕಾತಿ ಆದೇಶ ನೀಡಿದೆ ಎಂದು ಆರೋಪಿಸಿ, ಅದನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಿನಗೂಲಿ ಮತ್ತು ಗುತ್ತಿಗೆ ಪೌರಸೇವಾ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಆನಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ, ಜಿಲ್ಲಾಧಿಕಾರಿ ಸಕ್ರಮಾತಿ ಆದೇಶದಿಂದ ನೈಜ ಪವರ ಕಾರ್ಮಿಕರಿಗೆ ಅನ್ಯಾಯವಾಗಿದೆ. ಕೊರೊನಾ ವಾರಿಯರ್ಸ್‍ ಆಗಿ ಸೇವೆ ಮಾಡಿದ ಪೌರಕಾರ್ಮಿಕರ ಮೇಲೆ ಹಾಕಿರುವ ಸುಳ್ಳು ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಬೇಕು. ಮೂರು ತಿಂಗಳ ಬಾಕಿ ವೇತನ ಪಾವತಿಸಬೇಕು ಹಾಗೂ ಇಎಸ್‍ಐ ಹಣವನ್ನು ಕೂಡಲೇ ಪೌರಕಾರ್ಮಿಕರ ಖಾತೆಗಳಿಗೆ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ವಕೀಲ ಎಸ್.ಮಾರೆಪ್ಪ, ಜಿಲ್ಲಾಧ್ಯಕ್ಷ ಉರುಕುಂದಪ್ಪ, ಉಪಾಧ್ಯಕ್ಷ ಮುತ್ತಣ್ಣ, ಆರ್.ಹನುಮಂತು, ಅಬ್ರಾಹಂ, ಜೆ.ಮಲ್ಲೇಶಪ್ಪ, ಅಬ್ರಾಹಂ ಕಮಲಾಪುರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT