ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕವಿತಾಳ: ಅತ್ಯಾಚಾರ, ಕೊಲೆ ಘಟನೆ ಖಂಡಿಸಿ ಪ್ರತಿಭಟನೆ

Published : 27 ಆಗಸ್ಟ್ 2024, 15:34 IST
Last Updated : 27 ಆಗಸ್ಟ್ 2024, 15:34 IST
ಫಾಲೋ ಮಾಡಿ
Comments

ಕವಿತಾಳ: ಸಂಗನಾಳ ಗ್ರಾಮದ ದಲಿತ ಯುವಕನ ಕೊಲೆ ಪ್ರಕರಣ ಮತ್ತು ಪಶ್ಚಿಮ ಬಂಗಾಳದ ವೈದ್ಯೆ ಮೇಲಿನ ಅತ್ಯಾಚಾರ ಘಟನೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಎನ್.ಮೂರ್ತಿ ಬಣದ‌ ಮುಖಂಡರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಸಮಿತಿಯ ನಗರ ಘಟಕದ ಅಧ್ಯಕ್ಷ ಯಾಕೂಬ ಮಾತನಾಡಿ, ’ದಲಿತರ ಮೇಲೆ ಹಲ್ಲೆ ಮತ್ತಿತರ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ರಕ್ಷಣೆ ಇಲ್ಲದಂತಾಗಿದೆ. ಕುಟುಂಬಗಳಿಗೆ ಸೂಕ್ತ ರಕ್ಷಣೆ ಹಾಗೂ ನೆರವು ಒದಗಿಸಬೇಕುʼ ಎಂದು ಒತ್ತಾಯಿಸಿದರು.

ಸಂಘಟನೆ ಮುಖಂಡರಾದ ಹುಲಗಪ್ಪ ಸೈದಾಪುರ, ದುರುಗಪ್ಪ, ಮರಿಯಪ್ಪ ಕಟ್ಟಿಮನಿ, ಮಲ್ಲಪ್ಪ ಕಲಂಗೇರಿ, ಜೋಸೆಫ್‌ ಹುಲೇರ್‌, ಶಿವಪ್ಪ ಕಲಂಗೇರಿ, ಶಿವರಾಯಪ್ಪ, ನಾಗಪ್ಪ ತೆಲುಗರ, ವಿಜಯ ಕಡತಲ್‌, ಹುಸೇನಬಾಷಾ, ಜಂಬಣ್ಣ ಮತ್ತು ನಿಂಗಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕವಿತಾಳದಲ್ಲಿ ದಲಿತ ಸಂಘಟನೆ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿ ಕಂದಾಯ ನಿರೀಕ್ಷಕ ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಿದರು.
ಕವಿತಾಳದಲ್ಲಿ ದಲಿತ ಸಂಘಟನೆ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿ ಕಂದಾಯ ನಿರೀಕ್ಷಕ ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT