ಮಂಗಳವಾರ, ಅಕ್ಟೋಬರ್ 20, 2020
23 °C
ರಾಹುಲ್‍ಗಾಂಧಿ, ಪ್ರಿಯಾಂಕಾ ಗಾಂಧಿ ಮೇಲೆ ಪೊಲೀಸ್ ದೌರ್ಜನ್ಯ ಖಂಡನೆ

ರಸ್ತೆ ತಡೆ: ಮುಖಂಡರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿಂಧನೂರು: ಉತ್ತರಪ್ರದೇಶ ಹಾಥರಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ದಲಿತ ಯುವತಿಯ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದ ವೇಳೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್‍ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಸಂಚಾರ ತಡೆದು ಪ್ರತಿಭಟಿಸಲು ಮುಂದಾದ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ ಘಟನೆ ನಡೆಯಿತು.

‘ಉತ್ತರ ಪ್ರದೇಶದಲ್ಲಿ ನಮ್ಮ ನಾಯಕರೇ ಸುರಕ್ಷಿತವಲ್ಲ ಎಂದ ಮೇಲೆ ಅಲ್ಲಿನ ದಲಿತರು, ಮಹಿಳೆಯರು, ರೈತರು, ಕಾರ್ಮಿಕರು ಹೇಗೆ ಸುರಕ್ಷಿತವಾಗಿರಲು ಸಾಧ್ಯ. ಉತ್ತರಪ್ರದೇಶ ಗೂಂಡಾ ಮತ್ತು ಅತ್ಯಾಚಾರಿಗಳ ರಾಜ್ಯವಾಗಿದ್ದು, ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು’ ಎಂದು ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಬಸನಗೌಡ ಬಾದರ್ಲಿ ಆಗ್ರಹಿಸಿದರು.

ಶಹರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ, ಒಂದು ತಾಸು ನಂತರ ಯುವ ಕಾಂಗ್ರೆಸ್  ಕಾರ್ಯಕರ್ತರನ್ನು ಬಿಡುಗಡೆಗೊಳಿಸಲಾಯಿತು.

ಕೆಪಿಸಿಸಿ ಕಾರ್ಯದರ್ಶಿ ಕೆ.ಕರಿಯಪ್ಪ, ಮುಖಂಡರಾದ ವೆಂಕಟೇಶ ರಾಗಲಪರ್ವಿ, ಖಾಜಾಹುಸೇನ್ ರೌಡಕುಂದಾ, ಅಮರೇಶ ಬಾಗೋಡಿ, ಹನುಮೇಶ ಬಾಗೋಡಿ, ಹುಸೇನಬಾಷಾ, ಪ್ರಭು ದೇವರಗುಡಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು