ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಜ್ಞಾನಿಕ ಬೆಲೆ ನಿಗದಿಗೆ ಒತ್ತಾಯ

ಜಯ ಕರ್ನಾಟಕ ರಕ್ಷಣಾ ಸೇನೆಯಿಂದ ಮನವಿ ಸಲ್ಲಿಕೆ
Last Updated 2 ಡಿಸೆಂಬರ್ 2021, 5:17 IST
ಅಕ್ಷರ ಗಾತ್ರ

ಮಾನ್ವಿ: ಅಕಾಲಿಕ ಮಳೆಯಿಂದ ಹಾನಿಗೀಡಾದ ಬೆಳೆಗಳಿಗೆ ಪರಿಹಾರ ಘೋಷಣೆ, ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆಯ ತಾಲ್ಲೂಕು ಘಟಕದ ಪದಾಧಿಕಾರಿಗಳು ಬುಧವಾರ ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಈಚೆಗೆ ಸುರಿದ ಅಕಾಲಿಕ ಮಳೆಯಿಂದ ವಿವಿಧೆಡೆ ಲಕ್ಷಾಂತರ ಎಕರೆ ಪ್ರದೇಶದಲ್ಲಿ ರೈತರು ಬೆಳೆದ ಭತ್ತ, ಹತ್ತಿ, ತೊಗರಿ ಸೇರಿದಂತೆ ಇತರ ಬೆಳೆಗಳು ಹಾನಿಗೀಡಾಗಿವೆ. ಅಪಾರ ಪ್ರಮಾಣದ ಬೆಳೆ ನಷ್ಟದಿಂದ ರೈತರು ಆರ್ಥಿಕವಾಗಿ ತೊಂದರೆ ಅನುಭವಿಸುವಂತಾಗಿದೆ. ಬೆಳೆ ಹಾನಿಯಿಂದ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಬೆಳೆ ಹಾನಿಯ ಸಮೀಕ್ಷೆಗೆ ಕ್ರಮ ಕೈಗೊಳ್ಳಬೇಕು. ತುರ್ತಾಗಿ ಬೆಳೆ ಹಾನಿ ಪರಿಹಾರ ಘೋಷಿಸಬೇಕು. ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ಪರಿಹಾರ ನೀಡಿ ನೆರವಾಗಬೇಕು. ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು ಎಂದು ಜಯ ಕರ್ನಾಟಕ ರಕ್ಷಣಾ ಸೇನೆಯ ಪದಾಧಿಕಾರಿಗಳು ಒತ್ತಾಯಿಸಿದರು.

ತಹಶೀಲ್ದಾರ್ ಅಬ್ದುಲ್ ವಾಹಿದ್ ಅನುಪಸ್ಥಿತಿಯಲ್ಲಿ ಉಪತಹಶೀಲ್ದಾರ್ ಮಲ್ಲಿಕಾರ್ಜುನ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಜಯ ಕರ್ನಾಟಕ ರಕ್ಷಣಾ ಸೇನೆಯ ತಾಲ್ಲೂಕು ಅಧ್ಯಕ್ಷ ರಾಜಾ ವಿಜಯಕುಮಾರ ನಾಯಕ, ಇತರ ಪದಾಧಿಕಾರಿಗಳಾದ ಬಸವರಾಜ ನಿಲೋಗಲ್, ಶ್ರೀಕಾಂತ ಗುತ್ತೇದಾರ, ತಿಮ್ಮಪ್ಪ ನಾಯಕ, ಜಲಾಲ್ ಶಾಸ್ತ್ರೀ ಕ್ಯಾಂಪ್, ಬಸವರಾಜ ಮೇಟಿ, ರವಿಚಂದ್ರ ನಾಯಕ, ಅಮರೇಶ ಕಾವಲಿ, ಚಂದ್ರು ಚಿಮ್ಲಾಪುರ, ಸೀನು ಮಾನ್ವಿ, ಮಹ್ಮದ್ ಶಾಸ್ತ್ರೀ ಕ್ಯಾಂಪ್, ಸಾಬಣ್ಣ ನಾಯಕ ಸಾದಾಪುರ, ಯಲ್ಲಪ್ಪ ನೀರಮಾನ್ವಿ, ನಾಗರಾಜ ನಾಯಕ ಸಾದಾಪುರ, ನಾಗಪ್ಪ ನಾಯಕ ಸಾದಾಪುರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT