ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಉಪ್ಪಾರ ಸಮಾಜ ಸೇವಾ ಸಂಘದ ಪ್ರತಿಭಟನೆ

Published 24 ಮೇ 2024, 13:39 IST
Last Updated 24 ಮೇ 2024, 13:39 IST
ಅಕ್ಷರ ಗಾತ್ರ

ರಾಯಚೂರು: ‘ಭಗೀರಥ ಜಯಂತಿ ಕಾರ್ಯಕ್ರಮಕ್ಕೆ ಜೆಸ್ಕಾಂ ಅಧಿಕಾರಿ ಗೈರಾಗಿದ್ದನ್ನು ಖಂಡಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಉಪ್ಪಾರ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಮೇ 14ರಂದು ರಾಜ್ಯ ಸರ್ಕಾರದ ಆದೇಶದಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ  ಭಗೀರಥ ಮಹರ್ಷಿ ಜಯಂತಿ ಆಚರಣೆ ಮಾಡಲಾಗಿದೆ. ಅದರಂತೆ ಲಿಂಗಸೂಗೂರು ತಾಲ್ಲೂಕಿನ ಹಟ್ಟಿ ಪಟ್ಟಣದ ಜೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜೆಸ್ಕಾಂ ಅಧಿಕಾರಿ ಬನ್ನಪ್ಪ ಅವರು ಭಾಗವಹಿಸದೇ ನಿರ್ಲಕ್ಷ್ಯ ತೋರಿದ್ದಾರೆ. ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಗೌರವಾಧ್ಯಕ್ಷ ದೇವೇಂದ್ರಪ್ಪ ಉಪ್ಪಾರ, ಅಧ್ಯಕ್ಷ ಪಾಗುಂಟಪ್ಪ ಮಿರ್ಜಾಪೂರು, ಎಂ ಚಂದ್ರಶೇಖರ ಸೇರಿದಂತೆ ಸಮಾಜದ ಮುಖಂಡರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT