ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಸಚಿವ ಪ್ರಭು ಚವಾಣ್‌ ಕ್ಷಮೆಯಾಚನೆಗೆ ಒತ್ತಾಯ

Last Updated 7 ಏಪ್ರಿಲ್ 2021, 3:08 IST
ಅಕ್ಷರ ಗಾತ್ರ

ರಾಯಚೂರು: ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚೌವಾಣ್ ಅವರು ಸವಿತಾ ಸಮಾಜದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದು, ಕೂಡಲೇ ಸಚಿವರು ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸವಿತಾ ಸಮಾಜ, ನಗರ ಘಟಕ ಹಾಗೂ ಕ್ಷೌರಿಕ ಹಿತರಕ್ಷಣಾ ವೇದಿಕೆ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಮುಖಂಡರು ಮಂಗಳವಾರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಬಸವ ಕಲ್ಯಾಣ ವಿಧಾನಸಭಾ ಉಪ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಪಶು ಸಂಗೋಪನೆ ಸಚಿವ ಪ್ರಭು ಚೌವಾಣ್ ಅವರು ಸವಿತಾ ಸಮಾಜದ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಸಚಿವರು ಸಾರ್ವಜನಿಕ ಸ್ಥಳದಲ್ಲಿ ಒಂದು ಸಮಾಜದ ವಿರುದ್ಧ ಮಾತನಾಡಿದ್ದು ಸರಿಯಲ್ಲ. ಇದರಿಂದ ಸವಿತಾ ಸಮಾಜಕ್ಕೆ ಅಗೌರವ ನೀಡಿದ್ದಾರೆ ಎಂದು ದೂರಿದರು.

ಸವಿತಾ ಸಮಾಜದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಘವೇಂದ್ರ ಇಟಗಿ, ವಿಭಾಗಿ ಕಾರ್ಯದರ್ಶಿ ವೆಂಕಟೇಶ ಇಲ್ಲೂರು, ಜಿಲ್ಲಾಧ್ಯಕ್ಷ ವಿಜಯ ಭಾಸ್ಕರ್, ವಿ.ಗೋವಿಂದ, ಭೀಮೇಶ, ಚಂದ್ರಶೇಖರ ಇರ್ಚೆಡ್, ಗೋಪಾಲ ವಡವಾಟಿ, ಎನ್.ವೆಂಕಟೇಶ, ಕೆ.ಶ್ರೀನಿವಾಸ, ಎಸ್.ರಘು,ಸಿ. ಎ.ಗೋವಿಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT