ಮಂಗಳವಾರ, ಫೆಬ್ರವರಿ 18, 2020
16 °C

ರಾಯಚೂರು| ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ರಾಬ್ತಾ–ಇ–ಮಿಲ್ಲತ್‌ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿ ಮುಖಾಂತರ ಪ್ರಧಾನಮಂತ್ರಿ ಅವರಿಗೆ ಮನವಿ ಸಲ್ಲಿಸಿದ ಅವರು, ಹಲವು ವರ್ಷಗಳಿಂದ ಭಾರತದಲ್ಲಿ ನೆಲೆಸಿ ಇಲ್ಲಿಯೇ ವ್ಯಾಪಾರ ಆರಂಭಿಸಿ ನೆಮ್ಮದಿಯಿಂದ ಬದುಕುತ್ತಿರುವ ಜನತೆಗೆ ಕೇಂದ್ರ ಸರ್ಕಾರ ಒಂದು ದೇಶ ಒಂದು ಪೌರತ್ವ ಜಾರಿ ಮಾಡಿ ಬದುಕುವ ಹಕ್ಕು ಕಿತ್ತುಕೊಳ್ಳಲು ಹೊರಟಿದ್ದಾರೆ. ಮುಸ್ಲಿಂ ಸಮುದಾಯದವರನ್ನು ದೇಶದಿಂದ ಹೊರ ಹಾಕಲು ಈ ಕಾಯ್ದೆ ಜಾರಿಗೆ ತಂದಿದ್ದಾರೆ ಎಂದು ಆರೋಪಿಸಿದರು.

ಒಂದು ಧರ್ಮ ಗುರಿಯಾಗಿರಿಸಿ ಪೌರತ್ವ ತಿದ್ದಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ತಿರಸ್ಕರಿಸಬೇಕು. ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲ ದೇಶಗಳಲ್ಲಿಯೂ ಅಲ್ಪಸಂಖ್ಯಾತರು ಇದ್ದಾರೆ. ಕೂಡಲೇ ಪೌರತ್ವ ತಿದ್ದುಪಡೆ ಕಾಯ್ದೆ ಜಾರಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ರಬ್ಬತ್ ಇ ಮಿಲ್ಲತ್ ಅಧ್ಯಕ್ಷ ಮಹ್ಮದ್ ಎಕ್ಬಾಲ್, ಮೊಹ್ಮದ್ ಅಬ್ದುಲ್ ಶುಕುರ್, ಮೊಹ್ಮದ್ ನಿಜಾಮುದ್ದಿನ್, ಮೊಹ್ಮದ್ ಅಮೀದ್ ಖಾನ್, ಮುಫ್ತಿ ಕಲಿಮೂದ್ದೀನ್, ಅಬ್ದುಲ್ ಲತೀಫ್, ಜಮೀಲ್ ಸಿದ್ದೀಕಿ, ಮೋಹ್ಮದ್ ಆಸಿಮ್, ಇಕ್ಬಾಲ್ ಮನಿಯಾರ, ಉಸ್ಮಾನ್, ಅಸ್ಲಾಂ ಪಾಶ, ರಾಘವೇಂದ್ರ ಕುಷ್ಠಗಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು