ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯ ಕಲ್ಪಿಸಿ: ನ್ಯಾಯಾಧೀಶ ಸಾತ್ವಿಕ್

Published 22 ಆಗಸ್ಟ್ 2024, 15:37 IST
Last Updated 22 ಆಗಸ್ಟ್ 2024, 15:37 IST
ಅಕ್ಷರ ಗಾತ್ರ

ರಾಯಚೂರು: ‘ಜಿಲ್ಲೆಯ ಹಲವು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದಾಗ ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳು ಇಲ್ಲದೇ ಇರುವುದು ಕಂಡು ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳು ಅಂಗನವಾಡಿ ಕೇಂದ್ರಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಎಚ್.ಎ.ಸಾತ್ವಿಕ್ ಹೇಳಿದ್ದಾರೆ.

ಅಪೌಷ್ಟಿಕತೆ ನಿವಾರಣೆ ಸಲಹಾ ಸಮಿತಿಯ ಅಧ್ಯಕ್ಷ ನಿವೃತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡರ ಆದೇಶದ ಮೇರೆಗೆ ಜಿಲ್ಲೆಯ ಹಲವು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಪರಿಶೀಲಿಸಿ, ಕುಂದುಕೊರತೆ ಆಲಿಸಿ ಈ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಹೆಚ್ಚಿನ ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿವೆ. ಅಲ್ಲಿ ಸರಿಯಾದ ಆವರಣಗೋಡೆ ಮತ್ತು ಗಾಳಿ ಬೆಳಕಿನ ವ್ಯವಸ್ಥೆ ಇಲ್ಲ ಎಂದು ಹೇಳಿದ್ದಾರೆ.

‘ಜಿಲ್ಲೆಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ಊಟದಲ್ಲಿ ತರಕಾರಿ ಹಾಗೂ ಶಾಲಾ ಪೂರ್ವ ಶಿಕ್ಷಣ ಸಾಮಾಗ್ರಿಗಳನ್ನು ಸರಿಯಾಗಿ ಪೂರ್ಣ ಪ್ರಮಾಣದಲ್ಲಿ ಸರಬರಾಜು ಮಾಡಬೇಕು’ ಎಂದು ಸೂಚಿಸಿದ್ದಾರೆ.

‘ಬಾಡಿಗೆ ಕಟ್ಟಡದಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಸರ್ಕಾರಿ ಕಟ್ಟಡಗಳಿಗೆ ಸ್ಥಳಾಂತರಿಸಬೇಕು. ಒಳಾಂಗಣ, ಹೊರಾಂಗಣ ಮೈದಾನದ ವ್ಯವಸ್ಥೆ ಮಾಡಬೇಕು. ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣ ಮಾಡಬೇಕು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT