ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ, ಶಾಲೆಗಳಿಗೆ ಮೂಲಸೌಕರ್ಯ ಕಲ್ಪಿಸಿ: ಬಸನಗೌಡ ದದ್ದಲ್

ತಾಲ್ಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಬಸನಗೌಡ ದದ್ದಲ್ ಸೂಚನೆ
Published 29 ಆಗಸ್ಟ್ 2023, 10:09 IST
Last Updated 29 ಆಗಸ್ಟ್ 2023, 10:09 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ರಾಯಚೂರು: ‘ತಾಲ್ಲೂಕಿನ ಗ್ರಾಮಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು ಮತ್ತು ಶೌಚಾಲಯಗಳಲ್ಲಿ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ರಾಯಚೂರು ತಾಲ್ಲೂಕು ಪಂಚಾಯಿತಿ ಪ್ರಥಮ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಅಂಗನವಾಡಿ, ಶಾಲೆಗಳಲ್ಲಿ ಮೂಲಸೌಲಭ್ಯಗಳ ಕೊರತೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಂಗನವಾಡಿ ಕೇಂದ್ರ ಹಾಗೂ ಶಾಲೆಗಳ ಸುತ್ತಲೂ ಆವರಣ ಗೋಡೆ ನಿರ್ಮಾಣ ಮಾಡಬೇಕು. ಬಿಸಿಯೂಟ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ಆಹಾರ ಕೊಡುವಾಗ ಯಾವುದೇ ದೋಷಗಳಾಗಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.

ಆ.30ರಂದು ಸರ್ಕಾರದ ಮಹತ್ತರ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗುತ್ತಿದ್ದು, ಆ ಕಾರ್ಯಕ್ರಮದ ನೇರ ಪ್ರಸಾರ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚಾಲನೆ ನೀಡುವ ಕಾರ್ಯಕ್ರಮವನ್ನು ಆಯಾ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮಾಡಬೇಕು ಎಂದು ಸೂಚಿಸಿದರು.

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಕಾರ್ಯಕ್ರಮವನ್ನು ಹಬ್ಬದ ರೀತಿಯಲ್ಲಿ ಆಚರಿಸಬೇಕು. ಅದಕ್ಕಾಗಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ 300 ಜನ ಫಲಾನುಭವಿಗಳನ್ನು ಸೇರಿಸಬೇಕು ಮತ್ತು ಕಾರ್ಯಕ್ರಮಕ್ಕೆ ಆಗಮಿಸವವರಿಗೆ ಆಸನದ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.

ರಾಜ್ಯ ಮಟ್ಟದ ಕಾರ್ಯಕ್ರಮ ವೀಕ್ಷಣೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಎಲ್.ಇ.ಡಿ ಟಿವಿ ಅಥವಾ ಪ್ರಾಜೆಕ್ಟರ್ ಪರದೆ ಅಳವಡಿಸಬೇಕು. ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆ ಮಾಡಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ ಮಾತನಾಡಿ, ತಾಲ್ಲೂಕು ನೋಡಲ್ ಅಧಿಕಾರಿಗಳು ಗೃಹ ಲಕ್ಷ್ಮಿ ಯೋಜನೆಯ ಕಾರ್ಯಕ್ರಮದ ಸಿದ್ಧತೆಗಳನ್ನು ಪ್ರತಿ ಪಂಚಾಯಿತಿಗೆ ಭೇಟಿ ನೀಡಿ ಸರಿಯಾದ ರೀತಿಯಲ್ಲಿ ನಡೆಯುತ್ತಿದೇಯೇ ಎಂಬುವುದನ್ನು ನೋಡಿಕೊಳ್ಳಬೇಕು’ ಎಂದು ಸೂಚನೆ ನೀಡಿದರು.

ಗ್ರಾಮದ ಶಾಲೆಗಳನ್ನು ಹೊರತು ಪಡಿಸಿ ಸೂ‌ಕ್ತವಾಗಿರುವ ಸ್ಥಳಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಬೇಕು. ಶಾಲಾ ಮಕ್ಕಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮಕ್ಕೆ ಬಂದವರಿಗೆ ಊಟದ ವ್ಯವಸ್ಥೆಯಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಪ್ರಕಾಶ.ವಿ, ರಾಯಚೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್, ಆರ್.ಎ.ಪಿ.ಎಂ.ಸಿ ಅಧ್ಯಕ್ಷ ಜಯಂತರಾವ್ ಪತಂಗೆ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಸ್ವಾಮಿ, ಎಪಿಎಂಸಿ ಉಪಾಧ್ಯಕ್ಷ ಬಸಿರುದ್ದೀನ್, ತಾಲ್ಲೂಕು ಮಟ್ಟದ ಅಧಿಖಾರಿಗಳು, ವಿವಿಧ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT