ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸೌಕರ್ಯ ಒದಗಿಸಿ: ಹೆಚ್ಚುವರಿ ಜಿಲ್ಲಾಧಿಕಾರಿ

Published 28 ಡಿಸೆಂಬರ್ 2023, 15:51 IST
Last Updated 28 ಡಿಸೆಂಬರ್ 2023, 15:51 IST
ಅಕ್ಷರ ಗಾತ್ರ

ರಾಯಚೂರು: ‘ನಗರದಲ್ಲಿ ಡಿ.30ರಂದು ಸಹಕಾರ ಇಲಾಖೆಯ, ಸಹಾಕರ ಸಂಘಗಳ ನಿಬಂಧಕರ ಗ್ರೂಪ್-ಸಿ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಎದುರಾಗದಂತೆ ಅಧಿಕಾರಗಳು ಕ್ರಮ ಕೈಗೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್ ದುರುಗೇಶ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸಹಕಾರ ಇಲಾಖೆಯ, ಸಹಾಕರ ಸಂಘಗಳ ನಿಬಂಧಕರ ಗ್ರೂಪ್-ಸಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಶನಿವಾರ ರಾಯಚೂರು ನಗರದ 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಸಹಕಾರ ಇಲಾಖೆಯ, ಸಹಾಕರ ಸಂಘಗಳ ನಿಬಂಧಕರ ಗ್ರೂಪ್-ಸಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಮೇಲ್ವಿಚಾರಕರನ್ನು ಮತ್ತು ಸ್ಥಳೀಯ ನಿರೀಕ್ಷಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ತಲಾ ಒಬ್ಬರು ಮಾರ್ಗಾಧಿಕಾರಿ ಹಾಗೂತು ವೀಕ್ಷಕರನ್ನು ನೇಮಿಸಲಾಗಿದೆ’ ಎಂದು ತಿಳಿಸಿದರು.

‘ಪರೀಕ್ಷಾ ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಶೌಚಾಲಯ ಹಾಗೂ ಸ್ವಚ್ಛತೆ ಸೇರಿದಂತೆ ಇನ್ನಿತರ ಮೂಲಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು’ ಎಂದು ಸೂಚನೆ ನೀಡಿದರು.

‘ಪರೀಕ್ಷಾ ಕೇಂದ್ರದ ಸುತ್ತಲೂ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಿ ಭದ್ರತೆ ಒದಗಿಸಬೇಕು. ಪರೀಕ್ಷಾ ಕೇಂದ್ರದ ಒಳಗೆ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು, ಪರೀಕ್ಷಾ ಕೇಂದ್ರದ ಒಳಗೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳಿಗೆ ನೇಮಕಗೊಂಡ ಮೇಲ್ವಿಚಾರಕರು, ಸ್ಥಳೀಯ ನಿರೀಕ್ಷಣಾಧಿಕಾರಿಗಳು, ಮಾರ್ಗಾಧಿಕಾರಿಗಳು ಹಾಗೂ ವೀಕ್ಷಕರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ರಾಯಚೂರು ಉಪ ವಿಭಾಗಾಧಿಕಾರಿ ಮೆಹಿಬೂಬಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರರಬಾಬು, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಡಿ ಬಡಿಗೇರ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಭಂಡಾರಿ, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಸ್ಥಾನಿಕ ಜಾಗೃತದಳದ ಅಧಿಕಾರಿಗಳು, ಮೇಲ್ವಿಚಾರಕರು, ಮಾರ್ಗಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿ

ರಾಯಚೂರು: ಸಹಕಾರ ಇಲಾಖೆಯ, ಸಹಾಕರ ಸಂಘಗಳ ನಿಬಂಧಕರ ಗ್ರೂಪ್-ಸಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿರುವ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷೆ ಕೇಂದ್ರಕ್ಕೆ, ನಿಯೋಜಿಸಿದ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಹೊರತುಪಡಿಸಿ ಯಾರೂ ನಿಷೇಧಿತ ಪ್ರದೇಶವನ್ನು ಪ್ರವೇಶಿಸಕೂಡದು. ಪರೀಕ್ಷೆ ಕೇಂದ್ರದ ಸುತ್ತಮುತ್ತಲಿನ ಎಲ್ಲ ಝರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷೆ ಸಮಯದಲ್ಲಿ ಕಡ್ಡಾಯವಾಗಿ ಬಂದ್ ಮಾಡಬೇಕು ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT