ಗುರುವಾರ , ಡಿಸೆಂಬರ್ 5, 2019
20 °C

ಮನನೊಂದು ಕಾಂಗ್ರೆಸ್‌ಗೆ ರಾಜೀನಾಮೆ: ಪ್ರತಾಪಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ‘ಜಿಲ್ಲೆಯ ಮಸ್ಕಿ ವಿಧಾನಸಭೆ ಕ್ಷೇತ್ರದಿಂದ ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದರೂ ಕಾಂಗ್ರೆಸ್‌ ವರಿಷ್ಠರು ಸಚಿವ ಸ್ಥಾನ ನೀಡಲು ನಿರ್ಲಕ್ಷ್ಯ ಮಾಡಿದ್ದರಿಂದ ಮನನೊಂದು ರಾಜೀನಾಮೆ ನೀಡಿದೆ’ ಎಂದು ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

’ಅನುದಾನ ವಿಚಾರದಲ್ಲಿ ಅನ್ಯಾಯವಾಗಿರಲಿಲ್ಲ. ಆದರೆ ವೈಯಕ್ತಿಕವಾಗಿ ಗೌರವ ಸಿಗಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಯಕತ್ವ ಮೆಚ್ಚಿಕೊಂಡು ಬಿಜೆಪಿ ಸೇರ್ಪಡೆಯಾಗಿದ್ದೇನೆ. ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಎದುರಾಳಿಯಾಗಿದ್ದ ಬಸನಗೌಡ ಅವರು ಹೈಕೋರ್ಟ್‌ಗೆ ಸಲ್ಲಿಸಿದ ತಕರಾರು ಅರ್ಜಿ ವಾಪಸ್‌ ಪಡೆಯುವ ವಿಶ್ವಾಸವಿದೆ’ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು