ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಂಧನೂರು | ಪಿಎಸ್‍ಐ ಸಾವು: ಬಂಧನಕ್ಕೆ ಒತ್ತಾಯ

Published : 7 ಆಗಸ್ಟ್ 2024, 14:33 IST
Last Updated : 7 ಆಗಸ್ಟ್ 2024, 14:33 IST
ಫಾಲೋ ಮಾಡಿ
Comments

ಸಿಂಧನೂರು: ಯಾದಗಿರಿ ಪಿಎಸ್‌ಐ ಪರಶುರಾಮ್‌ ಸಾವಿಗೆ ಕಾರಣರಾದ ಶಾಸಕ ಚನ್ನಾರೆಡ್ಡಿ ಹಾಗೂ ಅವರ ಪುತ್ರ ಪಂಪನಗೌಡರನ್ನು ಬಂಧಿಸಬೇಕು. ಪರಶುರಾಮ್‌ ಕುಟುಂಬಕ್ಕೆ ₹2 ಕೋಟಿ ಪರಿಹಾರ ನೀಡಬೇಕು ಹಾಗೂ ಅವರ ಪತ್ನಿಗೆ ಸರ್ಕಾರಿ ನೌಕರಿ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ತಾಲ್ಲೂಕು ಘಟಕ ಬುಧವಾರ ಸ್ಥಳೀಯ ಮಿನಿವಿಧಾನಸೌಧ ಎದುರು ಪ್ರತಿಭಟಿಸಿತು. ಗ್ರೇಡ್-2 ತಹಶೀಲ್ದಾರ್ ಚಂದ್ರಶೇಖರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿತು.

2024-25ನೇ ಸಾಲಿನಲ್ಲಿ ವರ್ಗಾವಣೆ ಮಾಡುವಲ್ಲಿ ಶಾಸಕರು ಮತ್ತು ಮಂತ್ರಿಗಳು ರಾಜ್ಯದ ಎಲ್ಲ ಇಲಾಖೆಗಳಲ್ಲಿ ಲಂಚ ಪಡೆದಿದ್ದಾರೆ. ಮಾನಸಿಕ ಒತ್ತಡದಿಂದ ಪರಶುರಾಮ್‌ ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲದೆ ಅವರ ಕುಟುಂಬಕ್ಕೆ ಶಾಸಕರು ಮತ್ತು ಬೆಂಬಲಿಗರು ಜೀವ ಬೆದರಿಕೆ ಹಾಕುತ್ತಿದ್ದಾರೆ. ತಕ್ಷಣವೇ ಪೊಲೀಸ್ ಇಲಾಖೆ ಪರಶುರಾಮ್‌ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಜಿಲ್ಲಾ ಉಪಾಧ್ಯಕ್ಷ ಅಂಬಣ್ಣ ಮಲ್ಲಾಪುರ ಆಗ್ರಹಿಸಿದರು.

ತಾಲ್ಲೂಕು ಪ್ರಧಾನ ಕಾರ್ಯದರ್ಶಿ ದುಗ್ಗಪ್ಪ ಮಲ್ಲಾಪುರ, ಉಪಾಧ್ಯಕ್ಷರಾದ ಮಾರೆಪ್ಪ ರಾಮತ್ನಾಳ, ಕುಬೇರಪ್ಪ ಕೆ. ಹೊಸಳ್ಳಿ, ಸಹಕಾರ್ಯದರ್ಶಿ ನಾಗಲಿಂಗ ಜವಳಗೇರೆ, ಕಾರ್ಯದರ್ಶಿ ವೀರೇಶ ಸುಲ್ತಾನಾಪುರ, ಮುಖಂಡರಾದ ಬಿ.ಎನ್.ಯರದಿಹಾಳ, ಮೌನೇಶ ರಾಗಲಪರ್ವಿ, ಡಿ.ಡಿ.ದುರ್ಗಪ್ಪ, ದುಗ್ಗಪ್ಪ ಕೆ, ದುರ್ಗೇಶ್ ಜವಳಗೇರಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT