ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ಪಿಯು ಪರೀಕ್ಷೆ: 10,544 ವಿದ್ಯಾರ್ಥಿಗಳು ಹಾಜರು

Published 5 ಮಾರ್ಚ್ 2024, 11:47 IST
Last Updated 5 ಮಾರ್ಚ್ 2024, 11:47 IST
ಅಕ್ಷರ ಗಾತ್ರ

ರಾಯಚೂರು: ದ್ವಿತೀಯ ಪಿಯುಸಿ ರಾಜ್ಯಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ವಿಷಯದ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 11420 ವಿದ್ಯಾರ್ಥಿಗಳ ಪೈಕಿ 10,544 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 876 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ರಾಜ್ಯಶಾಸ್ತ್ರ ಪರೀಕ್ಷೆಗೆ ರಾಯಚೂರು ತಾಲ್ಲೂಕಿನಲ್ಲಿ 2784 ವಿದ್ಯಾರ್ಥಿಗಳು ಹಾಜರಾದರೆ, 260 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಲಿಂಗಸುಗೂರು ತಾಲ್ಲೂಕಿನಲ್ಲಿ 2136 ಹಾಜರು 93 ಗೈರು, ಮಾನ್ವಿ ತಾಲ್ಲೂಕಿನಲ್ಲಿ 1342 ಹಾಜರು 128 ಗೈರು, ಸಿಂಧನೂರು ತಾಲ್ಲೂಕಿನಲ್ಲಿ 1806 ಹಾಜರು 149 ವಿದ್ಯಾರ್ಥಿಗಳು ಗೈರು, ದೇವದುರ್ಗ ತಾಲ್ಲೂಕಿನಲ್ಲಿ 1349 ವಿದ್ಯಾರ್ಥಿಗಳು ಹಾಜರು, 161 ವಿದ್ಯಾರ್ಥಿಗಳು ಗೈರು, ಮಸ್ಕಿ ತಾಲ್ಲೂಕಿನಲ್ಲಿ 582 ಹಾಜರು 49 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಸಿರವಾರ ತಾಲ್ಲೂಕಿನಲ್ಲಿ 545 ವಿದ್ಯಾರ್ಥಿಗಳು ಹಾಜರಾಗಿದ್ದರೆ 36 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಸಂಖ್ಯಾಶಾಸ್ತ್ರ ವಿಷಯ ಪರೀಕ್ಷೆಗೆ 937 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 907 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 30 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಜಿಲ್ಲೆಯ ರಾಯಚೂರು ತಾಲ್ಲೂಕಿನಲ್ಲಿ 683 ವಿದ್ಯಾರ್ಥಿಗಳು ಹಾಜರಾದರೆ, 22 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಮಾನ್ವಿಯಲ್ಲಿ 218 ಹಾಜರು 08 ಗೈರು, ಸಿಂಧನೂರು ತಾಲ್ಲೂಕಿನಲ್ಲಿ 6 ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT