ಲಿಂಗಸುಗೂರು (ರಾಯಚೂರು ಜಿಲ್ಲೆ): ಪಟ್ಟಣದ ಖಾಸಗಿ ಪಿಯು ಕಾಲೇಜೊಂದರಲ್ಲಿ ಪ್ರಥಮ ಪಿಯು ವಿಜ್ಞಾನ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅದೇ ಕಾಲೇಜಿನ ವಸತಿನಿಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶುಕ್ರವಾರ ಮಧ್ಯಾಹ್ನ ಪತ್ತೆಯಾಗಿದ್ದು, ಕಾಲೇಜಿನ ಪ್ರಾಂಶುಪಾಲರೆ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿ ಪೋಸ್ಕೊ ದೂರು ದಾಖಲಿಸಿದ್ದಾರೆ.

ಆರೋಪಿ ಪ್ರಾಂಶುಪಾಲ ಪರಾರಿಯಾಗಿದ್ದು, ಪೊಲೀಸರು ಶೋಧ ಆರಂಭಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಹಾಸ್ಟೆಲ್ ಎದುರು ಜಮಾಯಿಸಿದ್ದ ಪಾಲಕರು ಹಾಗೂ ಸಂಬಂಧಿಗಳು ಆರೋಪಿ ಪತ್ತೆಗೆ ಒತ್ತಾಯಿಸಿದರು.

ಶುಕ್ರವಾರ ತಡರಾತ್ರಿ ಮೃತ ವಿದ್ಯಾರ್ಥಿನಿಯ ಚಿಕ್ಕಪ್ಪ ನೀಡಿದ ದೂರನ್ನು ಲಿಂಗಸುಗೂರು ಠಾಣೆ ಪೊಲೀಸರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಅತ್ಯಾಚಾರ ಎಸಗಿ ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಹೊಸ ಫೋಟೊ ಹಂಚಿಕೊಂಡ ನಟಿ ಸಮಂತಾ: ಸ್ವಯಂ ಪ್ರೀತಿ, ಪ್ರೇರಣೆಯ ಸಂದೇಶ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.