ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಫಲಿತಾಂಶ: ಒಂದು ಸ್ಥಾನ ಕುಸಿದ ರಾಯಚೂರು

Last Updated 15 ಏಪ್ರಿಲ್ 2019, 6:51 IST
ಅಕ್ಷರ ಗಾತ್ರ

ರಾಯಚೂರು: 2018-19 ಶೈಕ್ಷಣಿಕ ಸಾಲಿನ ಪಿಯುಸಿ ಫಲಿತಾಂಶ ಸೋಮವಾರ ಪ್ರಕಟಿಸಲಾಗಿದ್ದು, ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ರಾಯಚೂರು 27 ನೇ ಸ್ಥಾನದಲ್ಲಿದೆ. ಹಿಂದಿನ ವರ್ಷಕ್ಕಿಂತ ಒಂದು ಸ್ಥಾನ ಕುಸಿದಿದೆ.

ಜಿಲ್ಲೆಯ ಶೇಕಡಾವಾರು ಫಲಿತಾಂಶದಲ್ಲೂ ಶೇ 0.51 ರಷ್ಟು ಹಿಂದಿನ ವರ್ಷಕ್ಕಿಂತ ಕಳಪೆ ಸಾಧನೆಯಾಗಿದೆ. 2017-18 ನೇ ಶೈಕ್ಷಣಿಕ ವರ್ಷದಲ್ಲಿ ಶೇ 56.73 ರಷ್ಟು ಫಲಿತಾಂಶ ಬಂದಿತ್ತು.‌ ಈ ವರ್ಷ ಶೇ 56.22 ಫಲಿತಾಂಶ ಸಾಧನೆಯಾಗಿದೆ.

ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳು ಪಡೆದಿರುವ ಫಲಿತಾಂಶವನ್ನು ಹೋಲಿಸಿದರೆ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಿಗಿಂತ ರಾಯಚೂರು ಸ್ವಲ್ಪ ಮುಂಚೂಣಿಯಲ್ಲಿದೆ. ಬಳ್ಳಾರಿ ಪ್ರಥಮ, ಕೊಪ್ಪಳ ದ್ವಿತೀಯ ಹಾಗೂ ರಾಯಚೂರು ತೃತೀಯ ಸ್ಥಾನದಲ್ಲಿರುವುದು ಗಮನಾರ್ಹ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT