ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PU Results: ಕೂಲಿಕಾರನ ಮಗಳು ಕಾವೇರಿಗೆ 5ನೇ ರ್‍ಯಾಂಕ್

Published 10 ಏಪ್ರಿಲ್ 2024, 16:16 IST
Last Updated 10 ಏಪ್ರಿಲ್ 2024, 16:16 IST
ಅಕ್ಷರ ಗಾತ್ರ

ಲಿಂಗಸುಗೂರು (ರಾಯಚೂರು ಜಿಲ್ಲೆ): ಇಲ್ಲಿನ ಉಮಾ ಮಹೇಶ್ವರಿ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಕಾವೇರಿ ಶಿವಪ್ಪ ಅವರು ದ್ವಿತೀಯ ಪಿಯು ಪರೀಕ್ಷೆಯಲ್ಲಿ 600ಕ್ಕೆ 592 ಅಂಕ ಗಳಿಸಿ ರಾಜ್ಯಕ್ಕೆ 5ನೇ ರ‍್ಯಾಂಕ್ ಪಡೆದಿದ್ದಾರೆ.

ಲಿಂಗಸುಗೂರು ತಾಲ್ಲೂಕಿನ ಭೂಪುರ ತಾಂಡಾದ ಕೃಷಿ ಕೂಲಿಕಾರ ಶಿವಪ್ಪ ಅವರ ಮಗಳು ಕಾವೇರಿ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿ ತಾಂಡಾದ ಕೀರ್ತಿ ಹೆಚ್ಚಿಸಿದ್ದಾರೆ ಎಂದು ತಾಂಡಾದ ನಿವಾಸಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

‘ಪ್ರಜಾವಾಣಿ’ ಜೊತೆ ಮಾತನಾಡಿದ ಕಾವೇರಿ, ‘ಇಷ್ಟೊಂದು ಅಂಕ ಬರಲಿದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಕಾಲೇಜಿನಲ್ಲಿ ಉಪನ್ಯಾಸಕರ ಬೋಧನೆ ಸರಿಯಾಗಿ ಆಲಿಸಿ, ಪರಿಶ್ರಮ ಪಟ್ಟು ಓದಿರುವೆ. ನನ್ನ ಪರಿಶ್ರಮ ವ್ಯರ್ಥ ಆಗಿಲ್ಲ. ಯಪಿಎಸ್‌ಸಿ ಪರೀಕ್ಷೆ ಬರೆದು ಐಎಎಸ್‌ ಅಧಿಕಾರಿಯಾಗುವ ಗುರಿ ಇಟ್ಟುಕೊಂಡಿರುವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT