ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಪಿಎಸ್ಐ ಮರು ಪರೀಕ್ಷೆಯ ಫಲಿತಾಂಶ ಪ್ರಕಟಿಸಿ’

Published 25 ಮೇ 2024, 16:14 IST
Last Updated 25 ಮೇ 2024, 16:14 IST
ಅಕ್ಷರ ಗಾತ್ರ

ರಾಯಚೂರು: ‘545 ಪಿಎಸ್‌ಐ ಮರು ಪರೀಕ್ಷೆಯ ಫಲಿತಾಂಶ ಪ್ರಕಟಿಸಬೇಕು’ ಎಂದು ಜಿಲ್ಲೆಯ ಸ್ಪರ್ಧಾಕಾಂಕ್ಷಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.

2024ರ ಜನವರಿ 23ರಂದು ಹೈಕೋರ್ಟ್ ಆದೇಶದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಾರ್ಚ್ 1 ರಂದು ಅಂತಿಮ ಫಲಿತಾಂಶ ಪಟ್ಟಿ ಬಿಡುಗಡೆ ಮಾಡಿದೆ. ಈ ಸಂತಿಮ ಪಟ್ಟಿಯನ್ನು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಆಯ್ಕೆ ಪಟ್ಟಿ ತಯಾರಿಸಲು ಸೂಚಿಸಿದ್ದು, ಆದೇಶದಂತೆ ಶೀಘ್ರವೇ ನೇಮಕಾತಿ ವಿಭಾಗ 545 ಪಿಎಸ್ಐ ತಾತ್ಕಾಲಿ ಆಯ್ಕೆ ಪಟ್ಟಿ ಪ್ರಕಟಿಸಬೇಕು ಎಂದು ಒತ್ತಾಯಿಸಿದೆ.

ಗೃಹ ಸಚಿವ ಜಿ.ಪರಮೇಶ್ವರ, ಡಿ.ಜಿ ಮತ್ತು ಎಡಿಜಿಪಿ ನೇಮಕಾತಿ ವಿಭಾಗ ಗಂಭೀರವಾಗಿ ಪರಿಗಣಿಸಬೇಕು. ಪರೀಕ್ಷೆ ಬರೆದು 6 ತಿಂಗಳಾದರೂ ಆಯ್ಕೆಪಟ್ಟಿ ಪ್ರಕಟಿಸದ ಕಾರಣ ಚಿಂತಿಗೀಡು ಮಾಡಿದೆ. ಈಗಲಾದರೂ ಮರು ಪರೀಕ್ಷೆಯ ಫಲಿತಾಂಶ ಪ್ರಕಟಿಸಬೇಕು ಎಂದು ಸ್ಪರ್ಧಾ ಆಕಾಂಕ್ಷಿಗಳು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT