ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ಕ್ಷುಲ್ಲಕ ಕಾರಣಕ್ಕೆ ಜಗಳ: ನಾಲ್ವರಿಗೆ ಗಾಯ

Published 11 ಏಪ್ರಿಲ್ 2024, 15:52 IST
Last Updated 11 ಏಪ್ರಿಲ್ 2024, 15:52 IST
ಅಕ್ಷರ ಗಾತ್ರ

ರಾಯಚೂರು: ನಗರದ ಅಸ್ಕಿಹಾಳ ಬಡಾವಣೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಎರಡು ದಿನಗಳ ಹಿಂದೆ ವಾಹನ ಅಪಘಾತಕ್ಕೆ ಸಂಬಂಧಿಸಿದಂತೆ ಪಂಚಾಯಿತಿ ನಡೆಸಿರುವ ವಿಚಾರಕ್ಕೆ ಪರಸ್ಪರ ಹೊಡೆದಾಡಿದ್ದಾರೆ. ಎರಡು ಗುಂಪುಗಳು ಕಬ್ಬಿಣದ ರಾಡ್, ಬೆತ್ತ ಹಾಗೂ ಇತರೆ ವಸ್ತುಗಳಿಂದ ಹೊಡೆದಾಡಿದ್ದು ಘಟನೆಯಲ್ಲಿ ರೇಷ್ಮಾ, ನರಸಪ್ಪ,  ಮನೋಹರ, ಗಿರಿಜಾ ಎಂಬುವವರಿಗೆ ಗಾಯಗಳಾಗಿವೆ. ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಘಟನಾ ಸ್ಥಳಕ್ಕೆ ಪಶ್ಚಿಮ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ರಂಗಪ್ಪ, ಅನಿಲ್, ಪವನ್, ಸೀನು ಸೇರಿ 15 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT