ಮಂತ್ರಾಲಯ (ರಾಯಚೂರು): ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನೆ ಪ್ರಯುಕ್ತ ಮಂಗಳವಾರ ಉತ್ತರಾರಾಧನೆ ಹಾಗೂ ಮಹಾರಥೋತ್ಸವ ಜರುಗಿತು.

ಬೆಳಿಗ್ಗೆ ಮಠದ ಆವರಣದಿಂದ ಗುರುಸಾರ್ವಭೌಮ ವಿದ್ಯಾಪೀಠದ ಆವರಣದವರೆಗೆ
ರಾಘವೇಂದ್ರ ಸ್ವಾಮಿಗಳ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ರಥದ ಮೇಲೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು

ಭಜನಾ ಮಂಡಳಿಗಳು, ಡೊಳ್ಳು ಕುಣಿತ, ಬ್ಯಾಂಡ್ ವಾದನ ಹಾಗೂ ಕಲಾ ತಂಡಗಳು ಮೆರವಣಿಗೆಯ ಮೆರುಗು ಹೆಚ್ಚಿಸಿದವು. ಭಕ್ತರು ಸಾಂಪ್ರದಾಯಿಕ ವಸ್ತ್ರಗಳನ್ನು ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಂಭ್ರಮಿಸಿದರು.

ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಆಶೀರ್ವಚನ ನೀಡಿದರು. ಇದಕ್ಕೂ ಮೊದಲು ವಸಂತೋತ್ಸವದ ನಂತರ ಶ್ರೀಗಳು ಭಕ್ತರತ್ತ ಗುಲಾಲು ತೂರಿದರು. ಮೂಲ ಬೃಂದಾವನಕ್ಕೆ ಚಿನ್ನಾಭರಣಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.