ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಹುಲ್‍ಗಾಂಧಿ ಹುಟ್ಟುಹಬ್ಬ: ಹಣ್ಣು-ಹಂಪಲು ವಿತರಣೆ

Published 19 ಜೂನ್ 2024, 15:36 IST
Last Updated 19 ಜೂನ್ 2024, 15:36 IST
ಅಕ್ಷರ ಗಾತ್ರ

ಸಿಂಧನೂರು: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ 54ನೇ ಹುಟ್ಟುಹಬ್ಬದ ನಿಮಿತ್ತ ಬುಧವಾರ ತಾಲ್ಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಇಲ್ಲಿನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ, ಬಾಣಂತಿಯರಿಗೆ ಹಣ್ಣು-ಹಂಪಲು, ಹಾಲು ವಿತರಿಸಲಾಯಿತು.

ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ ಜವಳಿ, ಮುಖಂಡರಾದ ಶರಣಯ್ಯ ಕೋಟೆ, ಹಬೀಬ್ ಖಾಜಿ, ಯುಸೂಫ್ ಎತ್ಮಾರಿ, ವೀರೇಶ್ ಉಪ್ಪಲದೊಡ್ಡಿ, ಸಂತೋಷ್‌ ಹುಡಾ, ಬಸವರಾಜ್ ಹರಪೂರ್, ರಫೀ, ಜಾವೀದ್, ಸುದೀಪ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT