ಬೀದರ್: ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಉದ್ದೇಶದಿಂದ ಜಾರಿಗೆ ಬಂದ ಕಲಂ 371(ಜೆ)ಗೆ 12 ವರ್ಷಗಳು ಕಳೆದರೂ ಸಹ ಈ ಭಾಗದ ಜನರ ಜೀವನಮಟ್ಟದಲ್ಲಿ ನಿರೀಕ್ಷಿತ ಮಟ್ಟದ ಸುಧಾರಣೆ ಕಂಡುಬಂದಿಲ್ಲ. ಈ ಕುರಿತು ಚರ್ಚಿಸಿ, ಪರಿಹಾರ ಕಂಡುಕೊಳ್ಳಲು ಮೇ 24ರಂದು ರಾಯಚೂರಿನ ಎಸ್ಎಲ್ವಿ ಕೊಠಾರಿ ಫಂಕ್ಷನ್ ಹಾಲ್ನಲ್ಲಿ ಸಭೆ ಕರೆಯಲಾಗಿದೆ.

ಕಳೆದ 12 ವರ್ಷಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಸುಮಾರು ₹20 ಸಾವಿರ ಕೋಟಿ ಅನುದಾನ ಮಂಜೂರಾಗಿದೆ. ಅದರಲ್ಲಿ ಶೇಕಡಾ 40ಕ್ಕಿಂತ ಕಡಿಮೆ ಮೊತ್ತಕ್ಕೆ ಮಾತ್ರ ಕ್ರಿಯಾ ಯೋಜನೆ ರೂಪಿಸಲಾಗಿದೆ. 2025-26ನೇ ಸಾಲಿನಲ್ಲಿ ಮಂಜೂರಾದ ₹5,000 ಕೋಟಿ ಅನುದಾನದಲ್ಲಿ ಕೇವಲ ₹800 ಕೋಟಿಗೆ ಯೋಜನೆ ಸಿದ್ಧಪಡಿಸಿರುವುದು ಅಧಿಕಾರಿಗಳ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ವಿಭಾಗೀಯ ಮಹಾ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಬೆಲ್ದಾರ್ ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಮಿತಿ, ಹೈದರಾಬಾದ್ ಕರ್ನಾಟಕ ಜನಾಂದೋಲನ ಕೇಂದ್ರದಿಂದ ಜನಪರ ಸಂಘಟನೆಗಳು, ಚುನಾಯಿತ ಹಾಗೂ ಮಾಜಿ ಜನಪ್ರತಿನಿಧಿಗಳ ದುಂಡು ಮೇಜಿನ ಸಭೆ ಮತ್ತು ಸಮಾವೇಶವನ್ನು ಆಯೋಜಿಸಲಾಗಿದೆ. ರಾಘವೇಂದ್ರ ಕುಷ್ಟಗಿ ಅಧ್ಯಕ್ಷತೆ ವಹಿಸಲಿದ್ದು, ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಚರ್ಚಿಸಲಾಗುವುದು. ಜಿಲ್ಲೆಯಿಂದ ಜನಪ್ರತಿನಿಧಿಗಳು, ಹೋರಾಟಗಾರರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಚಿಂತಕರು, ಸಾಹಿತಿಗಳು ಹಾಗೂ ಲೇಖಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಅನಿಲ್ ಕುಮಾರ್ ಬೆಲ್ದಾರ್ ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-33-1180126806

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.