ರಾಯಚೂರು: ಸಂವಿಧಾನದ 371 (ಜೆ) ಕಲಂ ಜಾರಿಗೆ ಬಂದಿದ್ದರೂ ಕಲ್ಯಾಣ ಕರ್ನಾಟಕ ಭಾಗಕ್ಕೆ ನಿರೀಕ್ಷಿತ ಮಟ್ಟದಲ್ಲಿ ನ್ಯಾಯ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ಹಾದಿ ರೂಪಿಸಲು ಮೇ 24ರಂದು ರಾಯಚೂರಿನಲ್ಲಿ ಹೈದರಾಬಾದ್ ಕರ್ನಾಟಕ ಜನಾಂದೋಲನ ಕೇಂದ್ರದ ನೇತೃತ್ವದಲ್ಲಿ 371(ಜೆ) ಹೋರಾಟಗಾರರ ಸಮಾವೇಶ ಹಾಗೂ ದುಂಡು ಮೇಜಿನ ಸಭೆ ಆಯೋಜಿಸಲಾಗಿದೆ ಎಂದು ಹೈದರಾಬಾದ್ ಕರ್ನಾಟಕ ಜನಾಂದೋಲನ ಕೇಂದ್ರದ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ತಿಳಿಸಿದರು.

ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘24ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ರಾಯಚೂರಿನ ಸ್ಟೇಷನ್ ರಸ್ತೆಯಲ್ಲಿರುವ ಕೊಠಾರಿ ಫಂಕ್ಷನ್ ಹಾಲ್ (ಎಸ್.ಎಲ್.ವಿ ಹೋಟೆಲ್ ಹತ್ತಿರ)ನಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಜನಪ್ರತಿನಿಧಿಗಳು, ಮಾಜಿ ಶಾಸಕರು ಹಾಗೂ ಸಂಸದರು ಪಾಲ್ಗೊಳ್ಳಲಿದ್ದಾರೆ. 7 ಜಿಲ್ಲೆಗಳ ಪ್ರತಿನಿಧಿಗಳನ್ನೊಳಗೊಂಡ ಸಕ್ರಿಯ ಹೋರಾಟ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದರು.

ಚಾಮರಸ ಮಾಲಿಪಾಟೀಲ, ಹರವಿ ನಾಗನಗೌಡ, ಆರ್.ಬಸವರಾಜ, ಬೂದೆಪ್ಪ ಕರ್ಲಿ, ಚಂದ್ರಶೇಖರ ನೆಲಹಾಳ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-32-1197802672

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.