ವಕೀಲ ಹತ್ಯೆ ಖಂಡಿಸಿ ಪ್ರತಿಭಟನೆ

7

ವಕೀಲ ಹತ್ಯೆ ಖಂಡಿಸಿ ಪ್ರತಿಭಟನೆ

Published:
Updated:
Deccan Herald

ರಾಯಚೂರು: ಕಾರವಾರ ಜಿಲ್ಲೆಯ ದಾಂಡೇಲಿ ತಾಲ್ಲೂಕಿನ ವಕೀಲ ಅಜೀತ್ ನಾಯ್ಕ ಹತ್ಯೆ ಘಟನೆಯನ್ನು ಖಂಡಿಸಿ ರಾಯಚೂರು ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ನ್ಯಾಯಾಲಯದ ಕಲಾಪದಿಂದ ದೂರ ಉಳಿದು ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾ ನ್ಯಾಯಾಲಯದ ಸಂಕೀರ್ಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ರಾತ್ರಿ 9ಗಂಟೆ ಸಮಯದಲ್ಲಿ ಸಂಬಂಧಿಕರ ಮನೆಗೆ ತೆರಳಿದ್ದ ವಕೀಲ ಅಜೀತ್ ನಾಯ್ಕ ಮೇಲೆ ಅಪರಿಚಿತ ವ್ಯಕ್ತಯೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ವಕೀಲ ಮೃತಪಟ್ಟಿದ್ದಾರೆ ಎಂದರು.

ಆದ್ದರಿಂದ ವಕೀಲ ಅಜೀತ್ ನಾಯ್ಕ ಕೊಲೆ ಮಾಡಿರುವ ಆರೋಪಿಯನ್ನು ಕೂಡಲೇ ಬಂಧಿಸಬೇಕು. ಘಟನೆಯನ್ನು ಸಿಬಿಐ ತನಿಖೆಗೆ ವಹಿಸಿ, ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಘಟನೆಗಳನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುವ ಮೂಲಕ ವಕೀಲರು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ವಕೀಲರ ಸಂಘದ ಅಧ್ಯಕ್ಷ ಎನ್.ಭಾನುರಾಜು, ಶ್ರೀಧರ ಯಲಿ, ಜಿ.ಎಸ್ ವೀರಭದ್ರಪ್ಪ, ಈರಮ್ಮ, ನಾಗೇಶ ಚಿನಗುಡಿ, ನಿಸಾರ ಅಹಮ್ಮದ್, ಶಿವಶಂಕರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !