ರಾಯಚೂರು: ಕೃಷಿ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ, ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಕುರಿತ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮ ಇಲ್ಲಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಿತು. ಅಪೆಡಾ ಪ್ರಾಧಿಕಾರದ ವ್ಯವಹಾರ ಅಭಿವೃದ್ಧಿ ವ್ಯವಸ್ಥಾಪಕ ಕಾರಂತ ಮಾತನಾಡಿ,‘ ‘ರಾಯಚೂರು ಜಿಲ್ಲೆಯಲ್ಲಿ ಬೆಳೆದ ಹಸಿ ಮೆಣಸಿನಕಾಯಿ, ಮಿಡಿ ಸೌತೆಕಾಯಿ, ಅಕ್ಕಿ ಮತ್ತು ಮಾವಿನ ಹಣ್ಣಿಗೆ ಒಳ್ಳೆಯ ಬೇಡಿಕೆ ಇದೆ. ಅವುಗಳ ಗುಣಮಟ್ಟ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ’ ಎಂದರು.

ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಮಹಮದ್ ಅಲಿ ಅವರು ತೋಟಗಾರಿಕೆ ಇಲಾಖೆಯ ಯೋಜನೆಗಳು ಮತ್ತು ತೋಟಗಾರಿಕೆ ಬೆಳೆಗಳನ್ನು ಉತ್ತೇಜಿಸಲು ಇಲಾಖೆಯ ಕೈಗೊಂಡ ಕ್ರಮಗಳ ಮಾಹಿತಿಯನ್ನು ನೀಡಿದರು.

ಸಂಸ್ಕರಣೆ ಮತ್ತು ಆಹಾರ ತಂತ್ರಜ್ಞಾನ ಮುಖ್ಯಸ್ಥ ಶರಣೇಗೌಡ ಹಿರೇಗೌಡ ಮಾತನಾಡಿ ಆಹಾರ ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ ಮಹತ್ವ ಮತ್ತು ಲಾಭದ ಬಗ್ಗೆ ತಿಳಿಸಿದರು.

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ತಿಮ್ಮಣ್ಣ ಮಾತನಾಡಿದರು.

ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ವೀಣಾ, ಮಲ್ಲಾರೆಡ್ಡಿ, ಸಹ ಪ್ರಾಧ್ಯಾಪಕಿ ಹೇಮಲತಾ ಕೆ.ಜೆ., ಪ್ರಗತಿಪರ ರೈತ ಅಚ್ಯುತ್ ರೆಡ್ಡಿ, ಉದಯಕುಮಾರ ಸಾಹುಕಾರ, ರಂಗಪ್ಪ ನಾಯಕ, ಗೋಪಾಲರೆಡ್ಡಿ, ಚಂದ್ರಶೇಖರ ಊಗ್ಗನಹಳ್ಳಿ, ಶಂಕ್ರಪ್ಪ, ತಿಕ್ಕನಗೌಡ, ಮಹೇಶ ಭಲ್ಲಟಗಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-32-470645094

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.