ರಾಯಚೂರು: ರೈತರು ಹವಾಮಾನ ಹಾಗೂ ಭೂಮಿಗೆ ಅನುಗುಣವಾದ ಬೀಜಗಳ ತಳಿಗಳನ್ನು ಆಯ್ಕೆ ಮಾಡಿಕೊಂಡು ಕೃಷಿ ಮಾಡಬೇಕು. ವಿಶೇಷವಾಗಿ ಸೂರ್ಯಕಾಂತಿ ಬೀಜೋತ್ಪಾದನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡು ರೈತರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಅಮರೇಗೌಡ ಎ. ಹೇಳಿದರು.

ಇಲ್ಲಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಅಖಿಲ ಭಾರತ ಸಂಯೋಜಿತ ಬೀಜ ಸಂಶೋಧನಾ ಯೋಜನೆ, ಬೀಜ ಘಟಕ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ತಂತ್ರಜ್ಞರ ಸಂಸ್ಥೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಮುಂಗಾರು ಬೀಜ ದಿನೋತ್ಸವ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ವಿವಿಧ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಪಡೆದು ಅವುಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಅರುಣಕುಮಾರ ಹೊಸಮನಿ ಮಾತನಾಡಿ,‘ಮುಂಗಾರು ಹಂಗಾಮು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಮುಂಗಾರು ಬೆಳೆಗಳ ತಾಂತ್ರಿಕ ಮಾಹಿತಿ, ಸುಧಾರಿತ ಬೀಜೋತ್ಪಾದನಾ ತಂತ್ರಜ್ಞಾನ ಹಾಗೂ ರೈತರ ಸಹಭಾಗಿತ್ವದ ಬೀಜೋತ್ಪಾದನಾ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ’ ಎಂದು ತಿಳಿಸಿದರು.

ವಿಸ್ತರಣಾ ನಿರ್ದೇಶಕ ಎ.ಆರ್.ಕುರುಬರ್ ಮಾತನಾಡಿ,‘ವಿಶ್ವವಿದ್ಯಾಲಯದ ಬೀಜ ಘಟಕದ ಕಾರ್ಯ ಶ್ಲಾಘನೀಯವಾಗಿದೆ. ರೈತರು ಗುಣಮಟ್ಟದ ಬೀಜಗಳನ್ನು ವಿಶ್ವವಿದ್ಯಾಲಯದಿಂದ ಖರೀದಿಸಿ ಬಳಕೆ ಮಾಡಬೇಕು. ಜೊತೆಗೆ ಉತ್ತಮ ಗುಣಮಟ್ಟದ ಬೀಜೋತ್ಪಾದನೆ ಮಾಡಿದ ರೈತರನ್ನು ಅಭಿನಂದಿಸಿ, ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಕೃಷಿ ತಂತ್ರಜ್ಞರ ಸಂಸ್ಥೆಯ ಅಧ್ಯಕ್ಷ ಆರ್.ಎ.ಪಾಟೀಲ ಮಾತನಾಡಿ,‘ಕೃವಿವಿ ಅಭಿವೃದ್ಧಿಪಡಿಸಿದ ತಳಿಗಳ ಬೀಜಗಳನ್ನು ರೈತರು ಬಳಸಿ ಸುಧಾರಿತ ಕೃಷಿ ಕ್ರಮಗಳನ್ನು ಅನುಸರಿಸುವ ಮೂಲಕ ಹೆಚ್ಚಿನ ಲಾಭ ಪಡೆಯಬಹುದು’ ಎಂದು ಹೇಳಿದರು.

ತೊಗರಿ ತಳಿ ಟಿಎಸ್-3 ಆರ್ ಬೀಜೋತ್ಪಾದನೆಯಲ್ಲಿ ಅಧಿಕ ಇಳುವರಿ ಪಡೆದ ಸಿಂಧನೂರು ತಾಲ್ಲೂಕಿನ ಕುನ್ನಟಗಿ ಗ್ರಾಮದ ಯುವ ರೈತ ಶರಣಬಸಯ್ಯ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬೀಜ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗ ಮುಖ್ಯಸ್ಥೆ ಎನ್.ಎಂ. ಶಕುಂತಲಾ, ಕರ್ನಾಟಕ ರಾಜ್ಯ ಬೀಜ ನಿಗಮದ ಉಪ ವ್ಯವಸ್ಥಾಪಕ ಪ್ರಭು ತುರಾಯಿ, ಉಪ ನಿರ್ದೇಶಕಿ ಗೀತಾ ಹಾಜರಿದ್ದರು.

ನಂತರ ನಡೆದ ತಾಂತ್ರಿಕ ಗೋಷ್ಠಿಯಲ್ಲಿ ವಿಜ್ಞಾನಿಗಳು ವಿವಿಧ ಕೃಷಿ ಮತ್ತು ಬೀಜೋತ್ಪಾದನಾ ವಿಷಯಗಳ ಕುರಿತು ರೈತರಿಗೆ ಮಾಹಿತಿ ನೀಡಿದರು. ಜಿಲ್ಲೆಯ ವಿವಿಧ ಗ್ರಾಮಗಳಿಂದ ಸುಮಾರು 800ಕ್ಕೂ ಹೆಚ್ಚು ರೈತರು ಹಾಗೂ ವಿವಿಧ ಸಂಸ್ಥೆಗಳ ಬೀಜೋತ್ಪಾದನಾ ಅಧಿಕಾರಿಗಳು ಭಾಗವಹಿಸಿದ್ದರು.

ವಿಜಯಕುಮಾರ ಕೆ. ಸ್ವಾಗತಿಸಿದರು. ಉಮೇಶ ಹಿರೇಮಠ ನಿರೂಪಿಸಿದರು. ಮೇಘಾ ಬಿ. ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-32-290770234

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.