ರಾಯಚೂರು: ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎಸ್ಸಿ ಅಂತಿಮ ವರ್ಷದ ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗೆ 6 ದಿನಗಳ ಪ್ರಾಯೋಗಿಕ ತರಬೇತಿ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳು ಎನ್.ಆರ್. ಕುರುಬರ ಅವರ ಮಾರ್ಗದರ್ಶನದಲ್ಲಿ ವಿವಿಧ ಕೃಷಿ ವಿಜ್ಞಾನ ವಿಭಾಗಗಳ ಕುರಿತು ಪ್ರಾಯೋಗಿಕ ಮಾಹಿತಿ ಪಡೆದುಕೊಂಡರು.

ಶಿಕ್ಷಣ, ಬೆಳೆ ವಿಜ್ಞಾನ, ತೋಟಗಾರಿಕೆ, ಮಣ್ಣು ವಿಜ್ಞಾನ, ಬೀಜ ವಿಜ್ಞಾನ, ಕೀಟಶಾಸ್ತ್ರ, ರೋಗಶಾಸ್ತ್ರ, ಕೃಷಿ ತಂತ್ರಜ್ಞಾನ ಹಾಗೂ ಕೃಷಿ ಮಾರುಕಟ್ಟೆ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿಜ್ಞಾನಿಗಳು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ವಿವಿಧ ವಿಭಾಗಗಳ ಪ್ರಯೋಗಾಲಯಗಳು, ಬೀಜ ಘಟಕ, ಸಾವಯವ ಕೃಷಿ ಸಂಸ್ಥೆ ಹಾಗೂ ಪ್ರಮುಖ ಕೃಷಿ ಸಂಶೋಧನಾ ಕೇಂದ್ರಗಳಿಗೆ ಭೇಟಿ ನೀಡಿ ಕೃಷಿ ಕ್ಷೇತ್ರದ ಅನುಭವ ಪಡೆದರು.

ರಾಜ್ಯ ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತ ರೈತ ಎಚ್. ತಿಮ್ಮಾಪುರ ಗ್ರಾಮದ ಸುರೇಶ ಗೌಡ ಅವರು ವಿದ್ಯಾರ್ಥಿಗಳೊಂದಿಗೆ ತಮ್ಮ ಕೃಷಿ ಅನುಭವ ಹಂಚಿಕೊಂಡು, ಸಾವಯವ ಕೃಷಿ, ನೈಸರ್ಗಿಕ ಕೃಷಿ, ಹನಿ ನೀರಾವರಿ, ಪಶು ಸಂಗೋಪನೆ ಹಾಗೂ ಆಧುನಿಕ ಕೃಷಿ ಪದ್ಧತಿಗಳ ಕುರಿತು ಮಾಹಿತಿ ನೀಡಿದರು. ವೈಜ್ಞಾನಿಕ ಕೃಷಿಯಿಂದ ಹೆಚ್ಚಿನ ಲಾಭ ಗಳಿಸಬಹುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಥಿಯೊಫಿಲಸ್ ದೀನದಯಾಳ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಾದ ಆರ್. ರಾಜ್, ಜಗದೀಶ, ಸೂರ್ಯಪ್ರಕಾಶ, ರಿಶಾನಾ, ನಿರಂಜನ್ ಟಿ. ಹಾಗೂ ಕಿರಣ್ ರಾಜ್ ಅವರು ಏಪ್ರಿಲ್ 24ರಿಂದ 30ರವರೆಗೆ ನಡೆದ ತರಬೇತಿಯಲ್ಲಿ ಭಾಗವಹಿಸಿ ಪ್ರಾಯೋಗಿಕ ಕೃಷಿ ಜ್ಞಾನ ಸಂಪಾದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-32-83793552

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.