ರಾಯಚೂರು: ನಗರದ ಹೊರ ವಲಯದ ಯರಮರಸ್ ಬಳಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣದ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಪೂವಿತಾ ಎಸ್. ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಮಾನ ನಿಲ್ದಾಣದ ರನ್ ವೇ ಕಾಮಗಾರಿಯ ವೀಕ್ಷಣೆ ನಡೆಸಿ ಕಾಮಗಾರಿಯ ಪ್ರಗತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಒಟ್ಟು 1.7 ಕಿ.ಮೀ ಉದ್ದದ ರನ್ ವೇ ಪೈಕಿ ಇದುವರೆಗೆ 850 ಮೀಟರ್ನಷ್ಟು ರನ್ ವೇಗೆ ಮರಂ ಹಾಕಿದ್ದು ಬಾಕಿ ಕಾಮಗಾರಿ ಪ್ರಗತಿ ಹಂತದಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಬಳಿಕ ಜಿಲ್ಲಾಧಿಕಾರಿ, ಪ್ಯಾಸೆಂಜರ್ ಟರ್ಮಿನಲ್ ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಕಟ್ಟಡಕ್ಕೆ ಈಗಾಗಲೇ ಕಾಲಂ ಮತ್ತು ಚಾವಣಿ ಹಾಕಿದ್ದು, ಈಗ ರೂಪ್ ಟ್ರಸ್ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

ಇದೇ ವೇಳೆ ಎಲೆಕ್ಟ್ರಿಕಲ್ ಸಬ್ ಸ್ಟೇಷನ್ ಬಿಲ್ಡಿಂಗ್-1 ಮತ್ತು ಬಿಲ್ಡಿಂಗ್ 2ರ ಕಾಮಗಾರಿಗಳ ಬಗ್ಗೆ ಪರಿಶೀಲಿಸಿದರು.

12 ಸೆಕ್ಯುರಿಟಿ ವಾಚ್ ಟವರ್ ಪೈಕಿ 8 ಟವರ್ಗಳ ನಿರ್ಮಾಣ ಕಾರ್ಯ ನಡೆದಿದೆ. ವಿಮಾನ ನಿಲ್ದಾಣದ ಆವರಣದ ಒಳಭಾಗದ ರಸ್ತೆಗಳ ನಿರ್ಮಾಣ ಕಾಮಗಾರಿಯೂ ಪ್ರಗತಿಯಲ್ಲಿದೆ. ವಿಮಾನ ನಿಲ್ದಾಣದ ಒಟ್ಟು 8 ಕಿ.ಮೀ ಆವರಣ ಗೋಡೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ವಿಮಾನ ನಿಲ್ದಾಣದ ಕಾಮಗಾರಿಯ ವೇಗ ಹೆಚ್ಚಿಸಿ, ಬಾಕಿ ಉಳಿಸಿದ ಎಲ್ಲ ಕಾರ್ಯಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಹೊರ ವಲಯದ ದಂಡ್ ಗ್ರಾಮದ 108 ಹಾಗೂ ಏಗನೂರು ಗ್ರಾಮದ 30 ಮನೆಗಳ ಹಸ್ತಾಂತರ ಹಿನ್ನೆಲೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಲೇಔಟ್ಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಲೇಔಟ್ಗಳಲ್ಲಿ ಇರಬೇಕಾದ ಎಲ್ಲ ಮೂಲಸೌಕರ್ಯಗಳು ಅಚ್ಚುಕಟ್ಟಾಗಿ ಇರಬೇಕು. ಲೇಔಟ್ ಕಾಮಗಾರಿ ನಿಗದಿತ ಸಮಯದಲ್ಲಿ ಗುಣಮಟ್ಟದಿಂದ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪೂವಿತಾ ಎಸ್. ನಿರ್ದೇಶನ ನೀಡಿದರು.

ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ ಗಲಗ, ಸಹಾಯಕ ಎಂಜಿನಿಯರ್ ಮಹೇಶ, ಗುತ್ತಿಗೆದಾರ ಕಂಪನಿ ಕೆಎಂವಿದ ಪ್ರತಿನಿಧಿಗಳಾದ ಪ್ರವೀಣ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-32-1741533066

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.