ರಾಯಚೂರು: ‘ಜಿಲ್ಲೆಯಲ್ಲಿ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು, ಶಾಸನಗಳು ಹಾಗೂ ದಾಖಲೆಗಳ ಸಂಗ್ರಹವಿದ್ದಲ್ಲಿ, ಮಾಹಿತಿ ನೀಡಬೇಕು’ ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಸಾರ್ವಜನಿಕರಲ್ಲಿ ಮನವಿ ಮಾಡಿದರು.

ನಗರದ ನೂತನ ಜಿಲ್ಲಾಡಳಿತದ ಕಚೇರಿಯಲ್ಲಿ ಜ್ಞಾನ ಭಾರತ ಮಿಷನ್ ಯೋಜನೆಯಡಿ ರಾಷ್ಟ್ರೀಯ ಹಸ್ತಪ್ರತಿ ಸಮೀಕ್ಷಾ ಕಾರ್ಯಕ್ಕೆ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿ, ಮಾತನಾಡಿದರು.

‘ಪ್ರಾಚೀನ ಶಾಸನಗಳು, ಹಸ್ತ ಪ್ರತಿಗಳು, ಕೈಬರಹಗಳನ್ನು ತಂತ್ರಜ್ಞಾನದ ಮೂಲಕ ಶಾಶ್ವತವಾಗಿ ಉಳಿಸಲು ಅತ್ಯಂತ ಪುರಾತನ, ಹಳೆಯ ದಾಖಲೆಗಳ ಸಮೀಕ್ಷೆ, ಸಂರಕ್ಷಣೆ, ಡಿಜಟಲೀಕರಣಗೊಳಿಸಲು ಸರ್ಕಾರ ಜ್ಞಾನ ಭಾರತಂ ಮಿಷನ್ ಯೋಜನೆ ಜಾರಿಗೆ ತಂದಿದೆ’ ಎಂದು ತಿಳಿಸಿದರು.

‘ರಾಷ್ಟ್ರ, ರಾಜ್ಯದ ಶ್ರೀಮಂತ ಸಂಸ್ಕೃತಿ, ಪರಂಪರೆಗೆ ಒಂದೇ ರಾಷ್ಟ್ರೀಯ ವೇದಿಕೆ, ಸಾರ್ವಜನಿಕ ಪ್ರವೇಶ ಒದಗಿಸಲಾಗುವುದು. ಭವಿಷ್ಯದ ಪೀಳಿಗೆಗೆ ಜ್ಞಾನ ಸಂಪತ್ತು ಮತ್ತು ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ಡಿಜಿಟಲೀಕರಣಗೊಳಿಸಲಾಗುತ್ತಿದೆ’ ಎಂದರು.

‘ಜಿಲ್ಲೆಯಾದ್ಯಂತ ಗ್ರಂಥಾಲಯಗಳು, ದೇವಾಲಯಗಳು, ಮಠಗಳು, ಶೈಕ್ಷಣಿಕ ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು, ಪ್ರಾಚೀನ ಸಂಸ್ಥಾನಗಳು, ಪ್ರಾಚೀನ ಮನೆತನಗಳಲ್ಲಿ ಪುರಾತನ ಕಾಲದ ಅಪರೂಪದ ಹಸ್ತಪ್ರತಿ, ದಾಖಲೆಗಳ ಸಂಗ್ರಹ ಇರಬಹುದು. ಅವುಗಳ ಬಗ್ಗೆ ಇತಿಹಾಸಕಾರರು, ಸಂಶೋಧಕರು, ಸಾರ್ವಜನಿಕರು ಮಾಹಿತಿ ನೀಡಿ ಸಮೀಕ್ಷಾ ಕಾರ್ಯಕ್ಕೆ ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

‘ಸಾರ್ವಜನಿಕರು ಹಸ್ತಪ್ರತಿಗಳ ಬಗ್ಗೆ ಮಾಹಿತಿ ನೀಡುವುದರಿಂದ ಸರ್ಕಾರ ಅವುಗಳನ್ನು ವಶಪಡಿಸಿಕೊಳ್ಳಲಿದೆ. ಸಮಸ್ಯೆ ಆಗುತ್ತದೆ ಎಂಬ ಆತಂಕ, ಗೊಂದಲ ಬೇಡ. ಮಾಲೀಕರ ಅನುಮತಿಯೊಂದಿಗೆ ಅವುಗಳನ್ನು ಡಿಜಿಟಲೀಕರಣಗೊಳಿಸಿ ಮೂಲ ಪ್ರತಿ ಅವರ ಬಳಿಯೇ ಉಳಿಸಲಾಗುವುದು’ ಎಂದು ತಿಳಿಸಿದರು.

‘ಮಾಹಿತಿ ಇಲ್ಲಿ ನೀಡಿ’: ಸಾರ್ವಜನಿಕರು ಹಸ್ತಪ್ರತಿಗಳ ಬಗ್ಗೆ ಮಾಹಿತಿ ನೀಡಲು ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಗಣೇಶ ಗುಡಿ ಹತ್ತಿರ, ನಿಜಲಿಂಗಪ್ಪ ಕಾಲೊನಿ, ರಾಯಚೂರು-584101 ದೂರವಾಣಿ ಸಂಖ್ಯೆ: 08532-200677 ಅಥವಾ ಇಮೇಲ್: adtourismrcr@gmail.com ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ನಜೀರ್ ಅಹ್ಮದ್ ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾ ನಂದ, ಜಿಲ್ಲಾ ಪುರಾತತ್ವ ಸಂರಕ್ಷಣಾಧಿಕಾರಿ ಶಿವಪ್ರಕಾಶ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಿಲ್ಲಾ ವ್ಯವಸ್ಥಾಪಕ ಜಿ.ಹರೀಶ, ಪ್ರವಾಸೋದ್ಯಮ ಇಲಾಖೆಯ ಪ್ರಥಮ ದರ್ಜೆ ಸಹಾಯಕಿ ಕವಿತಾ ಅವರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-32-1481836364

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.