ರಾಯಚೂರು: ಲಿಂಗಸುಗೂರು ತಾಲ್ಲೂಕಿನ ಬಯ್ಯಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋಗಾಪುರ ಗ್ರಾಮದ ಅಂಗನವಾಡಿ ಕೇಂದ್ರ–2ರಲ್ಲಿ 2016ನೇ ಸಾಲಿನಲ್ಲಿ ನಡೆದ ಅಂಗನವಾಡಿ ಸಹಾಯಕಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಕನ್ನಡ ಸೇನೆ ಕರ್ನಾಟಕ ಸಂಘಟನೆಯ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಸಮಿತಿ ಪದಾಧಿಕಾರಿಗಳು ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನವಿನ್ಕುಮಾರ ಅವರಿಗೆ ಮನವಿ ಸಲ್ಲಿಸಿದರು.

ಈ ಹುದ್ದೆಗೆ ಭೋಗಾಪುರ ಗ್ರಾಮದ ಚೌಡಮ್ಮ ಗ್ಯಾನಪ್ಪ ಹಾಗೂ ಬಗಡಿ ತಾಂಡಾದ ನಿವಾಸಿ ವಿಜಯಶ್ರೀ ರಮೇಶ ಸೇರಿ ಇಬ್ಬರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಆದರೆ, ಸ್ಥಳೀಯ ಅಭ್ಯರ್ಥಿಯಾಗಿರುವ ಚೌಡಮ್ಮ ಅವರ ದಾಖಲೆ ಪರಿಗಣಿಸದೇ, ಸ್ಥಳೀಯರಲ್ಲದ ವಿಜಯಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ದೂರಿದರು. ಈ ನೇಮಕಾತಿಯನ್ನು ಸಮಗ್ರವಾಗಿ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಎಂ. ಬಸವರಾಜ ಮಾತನಾಡಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ.ಎಂ ಹಾಗೂ ಜಿಲ್ಲಾ ಕಾರ್ಯಾಧ್ಯಕ್ಷ ಹನುಮೇಶ ನಾಯಕ ಮೇಟಿ, ನಗರ ಘಟಕದ ಅಧ್ಯಕ್ಷ ಮಂಜುನಾಥ, ಮುಖಂಡರಾದ ಶಿವರಾಜ ಬಡಿಗೇರ, ನಿವೇದಿತಾ, ಉಪಾಧ್ಯಕ್ಷ ಶರಣು ಜಿ.ಪವಾರ್, ಶಿವು ಕೆಂಪು, ಅಮರೇಶ ನಾಯಕ, ಪದ್ಮಾ, ಚೌಡಮ್ಮ ಯಮನೂರಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-32-243499647

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.