ರಾಯಚೂರು: ‘ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಜಿಲ್ಲೆಯಲ್ಲಿ ಏಪ್ರಿಲ್ 23 ರಿಂದ ಮೇ 22ರವರೆಗೆ ಎಲ್ಲ ದನ ಹಾಗೂ ಎಮ್ಮೆಗಳಿಗೆ ಕಾಲುಬಾಯಿ ಜ್ವರ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ರೈತರು ಜಾನುವಾರುಗಳಿಗೆ ಲಸಿಕೆ ಹಾಕಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದರು.

ನಗರದ ನೂತನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕಾಲುಬಾಯಿ ರೋಗ ನಿಯಂತ್ರಣ ಕಾರ್ಯಕ್ರಮದ 9ನೇ ಜಿಲ್ಲಾ ಮೇಲುಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ರಾಜ್ಯ ಕಾಲುಬಾಯಿ ರೋಗ ನಿಯಂತ್ರಣ ಕಾರ್ಯಕ್ರಮದ ಮೇಲುಸ್ತುವಾರಿ ಸಮಿತಿಯ ಸೂಚನೆಯಂತೆ ಒಂದು ತಿಂಗಳ ವರೆಗೆ 9ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕೆ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲ ದನ ಹಾಗೂ ಎಮ್ಮೆಗಳಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

‘ರೈತರ ಮನೆ ಬಾಗಿಲಲ್ಲೇ ದನಗಳಿಗೆ ಕಾಲುಬಾಯಿ ಬೇನೆ ಲಸಿಕೆ ಹಾಕಲಾಗುವುದು. ಈ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ 29 ತಂಡಗಳನ್ನು ರಚಿಸಲಾಗಿದೆ. ಪ್ರತಿ ತಂಡದಲ್ಲಿ 1 ಮೇಲ್ವಿಚಾರಕರು ಹಾಗೂ 2 ಲಸಿಕದಾರರು ಇದ್ದಾರೆ. ಜಿಲ್ಲೆಯಲ್ಲಿರುವ 3,15,280 ದನಗಳು ಹಾಗೂ 2,31,927 ಎಮ್ಮೆಗಳನ್ನು ಲಸಿಕಾಕರಣಕ್ಕೆ ಒಳಪಡಿಸಲಾಗುವುದು. ಜಿಲ್ಲೆಯಲ್ಲಿ ಪ್ರತಿ 120 ಜಾನುವಾರಿಗೆ ಒಂದು ಬ್ಲಾಕ್ ಮಾಡಲಾಗಿದೆ ’ ಎಂದು ಹೇಳಿದರು.

‘ಲಸಿಕಾ ಅಭಿಯಾನದ ನಂತರ ಅಭಿಯಾನದಲ್ಲಿ ಬಿಟ್ಟು ಹೋಗಿರುವ ಜಾನುವಾರಿಗೆ ಲಸಿಕೆ ಹಾಕಲಾಗುವುದು’ ಎಂದು ತಿಳಿಸಿದರು.

ರೈತರ ಆರ್ಥಿಕ ಪರಿಸ್ಥಿತಿ ಉತ್ತಮ ಗೊಳಿಸುವುದು ಉದ್ದೇಶ: ಜಿಲ್ಲೆಯ ದನ, ಎಮ್ಮೆಗಳು ಕಾಲುಬಾಯಿ ಬೇನೆ ಮುಕ್ತವಾದಲ್ಲಿ ಜಾನುವಾರುಗಳ ಉತ್ಪನ್ನಗಳನ್ನು ಹೆಚ್ಚಿಸಿ, ರೈತರ ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ ಶೇ.100 ರಷ್ಟು ಗುರಿ ಸಾಧಿಸಲು ಸಹಕರಿಸಲು ಗ್ರಾಮೀಣ ಭಾಗದಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಪೋಮ್ಸಿಂಗ್ ಸ್ವಾಗತಿಸಿದರು. ಜಿಲ್ಲೆಯ ವಿವಿಧ ತಾಲ್ಲೂಕಿನ ಪಶು ವೈದ್ಯಾಧಿಕಾರಿಗಳು, ಕೆ.ಎಂ.ಎಫ್ ವಿಸ್ತರಣಾಧಿಕಾರಿಗಳು, ಕೆ.ಎಂ.ಎಫ್ ಪಶು ಅಧಿಕಾರಿಗಳು, ಮುಖ್ಯ ಪಶು ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-32-1926486962

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.