ರಾಯಚೂರು: ‘ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ಮತ್ತು ನಿಯಮ ಉಲ್ಲಂಘನೆ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು ಕೂಡಲೇ ನೇಮಕಾತಿಯನ್ನು ರದ್ದುಪಡಿಸಬೇಕು’ ಎಂದು ಕರ್ನಾಟಕ ನಾಯಕರ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ರವಿಕುಮಾರ ನಾಯಕ ಒತ್ತಾಯಿಸಿದರು.

‘ವಿಶ್ವವಿದ್ಯಾಲಯವು ಯುಜಿಸಿ ನಿಯಮಾವಳಿಗಳನ್ನು ಗಾಳಿಗೆ ತೂರಿ ತಮಗೆ ಬೇಕಾದವರನ್ನು ನೇಮಿಸಿಕೊಳ್ಳಲು ಸಂಚು ರೂಪಿಸಿದೆ. ಒಟ್ಟು 24 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕದಲ್ಲಿ ಪಾರದರ್ಶಕತೆ ಇಲ್ಲ. ಸಂದರ್ಶನದ ಅಂಕಗಳನ್ನು ಅಂದೇ ಪ್ರಕಟಿಸಬೇಕೆಂಬ ಸರ್ಕಾರದ ಆದೇಶವನ್ನು ಉಲ್ಲಂಘಿಸಲಾಗಿದೆ’ ಎಂದು ಗುರುವಾರ ಮಾಧ್ಯಮ ಗೋಷ್ಠಿಯಲ್ಲಿ ಆರೋಪಿಸಿದರು.

‘ಕುಲಸಚಿವ ಮತ್ತು ಕುಲಪತಿ ತಮ್ಮ ವಿವೇಚನಾ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ನಿಯಮಬಾಹಿರವಾಗಿ ಆಯ್ಕೆ ಪ್ರಕ್ರಿಯೆ ನಡೆಸುತ್ತಿದ್ದಾರೆ’ ಎಂದು ಆರೋಪ ಮಾಡಿದರು.

‘ನೇಮಕಾತಿಯಲ್ಲಿ ಒಳಮೀಸಲಾತಿ ಜಾರಿಗೊಳಿಸದಿರುವುದು ಮತ್ತು ಪಿಎಚ್ಡಿ ಪದವಿ ಇಲ್ಲದವರಿಗೆ ಆದ್ಯತೆ ನೀಡಿರುವುದು ಕಾನೂನುಬಾಹಿರವಾಗಿದೆ. ಕೋಟ್ಯಂತರ ರೂ. ಅವ್ಯವಹಾರ ನಡೆದಿದ್ದು, ಸಿಂಡಿಕೇಟ್ ಸದಸ್ಯರೂ ಮೌನಕ್ಕೆ ಶರಣಾಗಿದ್ದಾರೆ’ ಎಂದು ದೂರಿದರು. ‘ಸರ್ಕಾರ ಮಧ್ಯಪ್ರವೇಶಿಸಿ ಈ ಅಕ್ರಮ ನೇಮಕಾತಿ ತಡೆಹಿಡಿಯಬೇಕು. ಲೋಕಾಯುಕ್ತ ತನಿಖೆ ನಡೆಸಬೇಕು. ಒಂದು ವೇಳೆ ನ್ಯಾಯ ಸಿಗದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದರು.

ಜಾನ್ಸನ್, ಹನುಮೇಶ ನಾಯಕ, ಕೆ. ಶರಣು ನಾಯಕ, ಪ್ರಭಾಕರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-32-1383778808

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.