ರಾಯಚೂರು: ‘ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ನೂತನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಾ.ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಏಪ್ರಿಲ್ 5ರಂದು ಬೆಳಿಗ್ಗೆ 9 ಗಂಟೆಗೆ ಡಾ.ಬಾಬು ಜಗಜೀವನರಾಂ ಅವರ ವೃತ್ತದಲ್ಲಿನ ಪುತ್ಥಳಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಮಾಲಾರ್ಪಣೆ ಮತ್ತು ಗಣ್ಯರಿಂದ ಪುಷ್ಪನಮನ ಕಾರ್ಯಕ್ರಮ, ನಂತರ ರಂಗ ಮಂದಿರಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಡಾ.ಬಾಬು ಜಗಜೀವನರಾಂ ವೃತ್ತದ ಅಭಿವೃದ್ಧಿ ಕೆಲಸವನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಸಮಾಜದ ಮುಖಂಡ ರವೀಂದ್ರ ಜಲ್ದಾರ್ ಸಲಹೆ ನೀಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಂ ವೃತ್ತದ ಸುತ್ತಲೂ ಸಾಕಷ್ಟು ಸ್ವಚ್ಛತೆ ಕಾಯ್ದುಕೊಳ್ಳಬೇಕು. ಅಂಬೇಡ್ಕರ್ ವೃತದಲ್ಲಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು ಎಂದು ಸಮಾಜದ ಮುಖಂಡ ರಾಜು ಮನವಿ ಮಾಡಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪ್ರವೀಣಕುಮಾರ ಅವರು ಹಿಂದಿನ ಸಭೆಯ ನಡಾವಳಿಯನ್ನು ಓದಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಮಹಾನಗರ ಪಾಲಿಕೆ ಸಮಿತಿ ಕಾರ್ಯದರ್ಶಿ ಹಾಗೂ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಾ ಶಾವಂತಗೇರಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ–ಸಂಸ್ಥೆಗಳ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-32-343221012

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.