ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಸ್ಟೆಲ್ ಮೇಲ್ಚಾವಣಿ ಸಿಮೆಂಟ್ ಕಳಚಿ ಬಿದ್ದು ಮೂವರು ವಿದ್ಯಾರ್ಥಿಗಳಿಗೆ ಗಾಯ

Published 10 ಆಗಸ್ಟ್ 2024, 11:08 IST
Last Updated 10 ಆಗಸ್ಟ್ 2024, 11:08 IST
ಅಕ್ಷರ ಗಾತ್ರ

ರಾಯಚೂರು: ತಾಲ್ಲೂಕಿನ ಉಡಮಗಲ್ ಖಾನಾಪುರ ಗ್ರಾಮದ ಬಿಸಿಎಂ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಮೇಲ್ಚಾವಣಿಯ ಸಿಮೆಂಟ್ ಪದರು ಕಳಚಿ ಬಿದ್ದು ಶುಕ್ರವಾರ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

8ನೇ ತರಗತಿಯ ವಿದ್ಯಾರ್ಥಿಗಳಾದ ಗುರುವೇಶ ಜುಲಮಗೇರಾ,  ಕಾರ್ತಿಕ ವಡ್ಲೂರು  ಹಾಗೂ ಕಿರಣ್ ವಡ್ಲೂರು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿ ಕಾರ್ತಿಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಿ ಕಳುಹಿಸಲಾಗಿದೆ, ಗುರುವೇಶ ಮತ್ತು ಕಿರಣ್ ಇವರ ತಲೆಗೆ ಪೆಟ್ಟಾಗಿದ್ದು ಚಿಕಿತ್ಸೆ ನೀಡಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಶುಕ್ರವಾರ ಸಂಜೆ 6 ಗಂಟೆಗೆ 16 ಜನ ವಿದ್ಯಾರ್ಥಿಗಳು ಇರುವ ಕೊಠಡಿಯಲ್ಲಿ ಓದುತ್ತ ಕುಳಿತಿದ್ದಾಗ ಸಿಮೆಂಟ್‌ ಕಳಚಿ ಬಿದ್ದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT