ರಾಯಚೂರು: ‘ಪ್ರಯತ್ನ ಹಾಗೂ ಸಾಧನೆಯ ದ್ಯೋತಕವಾದ ಭಗೀರಥ ಮಹರ್ಷಿಯ ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕ’ ಎಂದು ಸಂಸದ ಜಿ.ಕುಮಾರ ನಾಯಕ ಹೇಳಿದರು.

ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಪೋಷಕರು ಮಕ್ಕಳಿಗೂ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾಜ ಬದಲಾವಣೆಗೆ ನೆರವಾಗಬೇಕು. ಸರ್ಕಾರದ ವಿವಿಧ ಸೌಲಭ್ಯಗಳನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.

ರಾಯಚೂರು ತಹಶಿಲ್ದಾರ್ ಸುರೇಶ ವರ್ಮಾ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಜಿಲ್ಲಾ ಸಂಚಾಲಕಿ ಸ್ಮಿತಾ ಅಕ್ಕ ಮಾತನಾಡಿದರು.

ಯೋಗ ಶಿಕ್ಷಕ ರಾಘವೇಂದ್ರ ನೀಲನ್ನವರ ಅವರು ಶ್ರೀ ಭಗೀರಥ ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ: ಭಗೀರಥ ಜಯಂತಿ ಅಂಗವಾಗಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಾದ ರೇಖಾ, ಕೃತಿಕಾ, ತ್ರಿವೇಣಿ, ಅಂಜಲಿ, ಶ್ರೀನಿವಾಸ ಹಾಗೂ ಪವಿತ್ರ ಅವರಿಗೆ ಸನ್ಮಾನ ಮಾಡಲಾಯಿತು.

ಮಾಲಾರ್ಪಣೆ: ಭಗೀರಥ ಜಯಂತಿ ಅಂಗವಾಗಿ ನಗರದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಆವರಣದಲ್ಲಿ ಭಗೀರಥ ಪ್ರತಿಮೆಗೆ ಶಾಸಕ ಡಾ.ಶಿವರಾಜ ಎಸ್.ಪಾಟೀಲ, ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್, ಕೃಷಿ ಮಾರುಕಟ್ಟೆ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ, ರಾಯಚೂರು ಉಪ ವಿಭಾಗಾಧಿಕಾರಿ ಹಂಪಣ್ಣ ಸಜ್ಜನ್ ಮಾಲಾರ್ಪಣೆ ಮಾಡಿದರು.

ನಂತರ ನಗರದ ಗೀತಾಮಂದಿರ, ಸದರ ಬಜಾರ್, ಸೂಪರ್ ಮಾರ್ಕೆಟ್, ಅಂಬೇಡ್ಕರ್ ಸರ್ಕಲ್ ಮಾರ್ಗವಾಗಿ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗ ಮಂದಿರಕ್ಕೆ ಮೆರವಣಿ ನಡೆಯಿತು.

ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತ ಶರಣಪ್ಪ, ಮುಖಂಡರಾದ ಕೆ.ಶಾಂತಪ್ಪ, ಚನ್ನಪ್ಪ ಗೌಡ, ಮುಖಂಡರಾದ ಪಾಗುಂಟಪ್ಪ ಮಿರ್ಜಾಪುರ, ದೇವೇಂದ್ರಪ್ಪ, ವೆಂಕೋಬ, ಚಂದ್ರಶೇಖರ, ನಾಗರಾಜ, ಸುರೇಖಾ, ಶ್ರೀನಿವಾಸ, ನಿವೃತ್ತ ಡಿವೈಎಸ್ಪಿ ರಮೇಶ ಮೇಟಿ, ಸುಭಾಷ್ ಚಂದ್ರ, ನರಸಿಂಹಲು, ವರಮೂನಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-32-1324297105

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.