ರಾಯಚೂರು: ‘ಜಿಲ್ಲಾಡಳಿತದಿಂದ ಏ.23ರಂದು ಭಗೀರಥ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ನೂತನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಭಗೀರಥ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಏಪ್ರಿಲ್ 23ರಂದು ಬೆಳಿಗ್ಗೆ 9ಕ್ಕೆ ನಗರದ ಲಕ್ಷ್ಮಿ ವೆಂಕಟೇಶ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಲಿದೆ. ನಂತರ ಬೆಳಿಗ್ಗೆ 11ಕ್ಕೆ ನಗರದ ರಂಗ ಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸಮುದಾಯದ ಮುಖಂಡರ ಸಲಹೆಯಂತೆ ಸಾನ್ನಿಧ್ಯ ಹಾಗೂ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಯನ್ನು ಆಹ್ವಾನಿಸಲಾಗುವುದು’ ಎಂದರು.

‘ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಆಚರಣೆ ಮಾಡುವಂತೆ ಆದೇಶ ಹೊರಡಿಸಲು ಕ್ರಮ ವಹಿಸಬೇಕು’ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ, ಸಮಾಜದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾ ಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-32-1758660940

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.