ರಾಯಚೂರು: ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನವನ್ನು ಪಕ್ಷದ ಕಚೇರಿಯಲ್ಲಿ ಸೋಮವಾರ ಆಚರಿಸಲಾಯಿತು.

ವಿಧಾನ ಪರಿಷತ್ತಿನ ಮಾಜಿ ಸದಸ್ಯ ಶಂಕ್ರಪ್ಪ ಧ್ವಜಾರೋಹಣ ನೇರವೇರಿಸಿದರು. ನಂತರ ಮಾತನಾಡಿದ ಅವರು, 'ಅಂದಿನ ಹಿರಿಯರ ದೂರದೃಷ್ಟಿಯೇ ಇಂದಿನ ಸದೃಢ ಭಾರತ ನಿರ್ಮಾಣಕ್ಕೆ ಬುನಾದಿಯಾಗಿದ್ದು, ಸದ್ಭಾವದ ಸೇವೆಯೇ ತಾಯಿ ಭಾರತಿಯನ್ನು ರಕ್ಷಿಸಿಕೊಳ್ಳಲು ತಳಪಾಯವಾಗಿದ್ದು, ತಾವೆಲ್ಲರೂ ಪ್ರಲೋಭನೆ ರಹಿತ ಸಮರ್ಪಿತ ಸೇವೆ ಸಲ್ಲಿಸಿ ದೇಶದ ಸಾಂಸ್ಕೃತಿಕ ರಾಷ್ಟ್ರೀಯತೆಯನ್ನು ಎತ್ತಿ ಹಿಡಿಯಬೇಕು’ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ ಮಾತನಾಡಿ, ‘ಹಿರಿಯರ ಮಾರ್ಗದರ್ಶನದಲ್ಲಿ ನಡೆದು, ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿಕೊಂಡು ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಳ್ಳೊಣ’ ಎಂದು ಹೇಳಿದರು.

‘ಜನರನ್ನು ದೇಶ ಸೇವೆಯ ಕಾರ್ಯದಲ್ಲಿ ತೊಡಗುವಂತೆ ಪ್ರೆರೇಪಿಸುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡೋಣ’ ಎಂದರು.

ತ್ರಿವಿಕ್ರಮ ಜೋಶಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂತೋಷ ರಾಜಗುರು ವಂದಿಸಿದರು.

ಈ ಸಂದರ್ಭದಲ್ಲಿ ಕೆ. ಎಂ. ಪಾಟೀಲ, ರವೀಂದ್ರ ಜಾಲ್ದಾರ್, ಗೋವಿಂದ, ಶಂಕರ್ ರೆಡ್ಡಿ, ತ್ರಿವಿಕ್ರಮ ಜೋಶಿ, ರಾಘವೇಂದ್ರ ಊಟಕುರ್, ಸಿದ್ದನಗೌಡ ನೆಲಹಾಳ, ಬಂಡೇಶ್, ನಾಗರಾಜ್ ಭಾಲ್ಕಿ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-32-731864546

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.