ರಾಯಚೂರು: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ರಾಯಚೂರು ತಾಲ್ಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಯುವಕನನ್ನು ಕೊಲೆ ಮಾಡಿದ ಘಟನೆ ಭಾನುವಾರ ಸಂಜೆ ನಡೆದಿದೆ.

ಬುಳ್ಳಾಪುರ ಗ್ರಾಮದ ಪ್ರಾಣೇಶ(23) ಕೊಲೆಯಾದ ಯುವಕ. ದಿನ್ನಿ ಗ್ರಾಮದ ಪ್ರಸಾದ, ಮಲ್ಲೇಶ, ಮಲ್ಲಿಕಾರ್ಜುನ, ಅಮರೇಶ ಕೊಲೆ ಆರೋಪಿಗಳು.

ಆರೋಪಿ ಪ್ರಸಾದ ಪತ್ನಿ ಮತ್ತು ಪ್ರಾಣೇಶ ನಡುವೆ ಅನೈತಿಕ ಸಂಬಂಧ ಇತ್ತು ಎನ್ನಲಾಗುತ್ತಿದೆ. ಬುಳ್ಳಾದಲ್ಲಿ ಜಾಗದ ವಿಷಯವಾಗಿ ನ್ಯಾಯ ಪಂಚಾಯಿತಿ ನಡೆಯುತ್ತಿದ್ದ ವೇಳೆ ತಾಯಿಯ ಎದುರಲ್ಲೇ ಕೊಡಲಿಯಿಂದ ಹೊಡೆದು ಕೊಲೆ ಮಾಡಲಾಗಿದೆ. ಮೂರು ತಿಂಗಳಿನಿಂದ ಪ್ರಾಣೇಶಗಾಗಿ ಹುಡುಕಾಟ ನಡೆಸುತ್ತಿದ್ದರು. ಪ್ರಾಣೇಶ ಇರುವುದನ್ನು ಖಚಿತಪಡಿಸಿಕೊಂಡು ಹಿಂದಿನಿಂದ ಬಂದ ಪ್ರಸಾದ ತಲೆಗೆ ಕೊಡಲಿಯಿಂದ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಪ್ರಾಣೇಶನನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ಬಳಿಕ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.