ರಾಯಚೂರು: ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯ ಅಂಗಸುಗೂರು ರಸ್ತೆಯ ರಾಜ್ಯ ಹೆದ್ದಾರಿ ಸಂಖ್ಯೆ 20ರಿಂದ ರಾಷ್ಟ್ರೀಯ ಹೆದ್ದಾರಿ-167ರ ಮಂತ್ರಾಲಯದ ರಸ್ತೆವರೆಗೆ ಬೈಪಾಸ್ ಚತುಷ್ಪಥ ರಸ್ತೆ ನಿರ್ಮಾಣ ಮಾಡಲು ಅನುಮೋದನೆ ನೀಡಿ, 2026-27 ನೇ ಸಾಲಿನ ಆಯವ್ಯಯದಲ್ಲಿ ₹250 ಕೋಟಿ ಅನುದಾನ ಒದಗಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ವಸಂತಕುಮಾರ ಮನವಿ ಮಾಡಿದ್ದಾರೆ.

ಬೆಂಗಳೂರಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿದರು.

‘ಅಂಗಸುಗೂರಿನ ರಾಜ್ಯ ಹೆದ್ದಾರಿ ಮಾರ್ಗವಾಗಿ ನಿತ್ಯ ಸಾವಿರಾರು ಜನ ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ಹೋಗಿ ಬರುತ್ತಾರೆ. ಈ ಮಾರ್ಗದಲ್ಲಿ ಸಂಚಾರ ಒತ್ತಡವೂ ಅಧಿಕವಾಗಿದೆ. ರಾಜ್ಯ ಸರ್ಕಾರ ಚತುಷ್ಪಥ ನಿರ್ಮಾಣ ಮಾಡಿದರೆ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಿದೆ’ ಎಂದು ಕೇಳಿಕೊಂಡರು.

ಸಿಂಧನೂರು ಶಾಸಕ ಬಸನಗೌಡ ಬಾದರ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.