ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು: ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಕೇಂದ್ರ ಹೆಚ್ಚುವರಿ ಕಾರ್ಯದರ್ಶಿ ಭೇಟಿ

Published : 10 ಸೆಪ್ಟೆಂಬರ್ 2024, 14:06 IST
Last Updated : 10 ಸೆಪ್ಟೆಂಬರ್ 2024, 14:06 IST
ಫಾಲೋ ಮಾಡಿ
Comments

ರಾಯಚೂರು: ಕೇಂದ್ರ ಸರ್ಕಾರದ ಜಲಶಕ್ತಿ ಸಚಿವಾಲಯ, ಜಲ ಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜ್ಜೀವನ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಸುಭೋದ್ ಯಾದವ್ ಸೋಮವಾರ ನಗರದ 60 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಹೆರಿಗೆಯಾದ ತಾಯಿ ಮತ್ತು ಮಕ್ಕಳ ಆರೈಕೆಗೆ ಆಸ್ಪತ್ರೆಯಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು.

ತಾಯಿ ಮತ್ತು ಮಗುವಿಗೆ ಆಸ್ಪತ್ರೆಯಲ್ಲಿ ಸೊಳ್ಳೆ ಪರದೆ ಅಳವಡಿಸಬೇಕು ಮತ್ತು ಸ್ವಚ್ಚತೆ ಕಾಪಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಶೌಚಾಲಯಗಳು ಸ್ವಚ್ಛತೆಯನ್ನು ಕಾಪಾಡಬೇಕು. ಸ್ಥಳದಲ್ಲಿದ ಅಧಿಕಾರಿಗಳಿಗೆ ಸೂಚಿಸಿ, ಆಸ್ಪತ್ರೆಯಲ್ಲಿರುವ ಲ್ಯಾಬ್ ಟೆಕ್ನಿಷಿಯನ್ ಕೇಂದ್ರವನ್ನು ಪರಿಶೀಲಿಸಿದರು.

ನಂತರ ಹೈದರಾಬಾದ್ ರಸ್ತೆಯಲ್ಲಿರುವ ಹಳೆ ತರಕಾರಿ ಮಾರುಕಟ್ಟೆಯಲ್ಲಿ ಸ್ಥಾಪಿಸಲಾಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಕ್ಕೆ ಭೇಟಿ ನೀಡಿ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಿರುವ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ಪಡೆದುಕೊಂಡರು. ರಾಯಚೂರು ನಗರ ಮತ್ತು ಗ್ರಾಮೀಣ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಿಗೆ ಆಹಾರವನ್ನು ಸರಬರಾಜು ಮಾಡಲಾಗುತ್ತದೆ. ಕೇಂದ್ರದಲ್ಲಿ ಕಳ್ಳತನ ತಡೆಯುವದರ ಬಗ್ಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಜಿಲ್ಲಾ ನಿರೂಪಣಾಧಿಕಾರಿ ಶರಣಮ್ಮ ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾ‌ರಿ ನಿತೀಶ್ ಕೆ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವಕ್ಷಣಾಧಿಕಾರಿ ಡಾ.ಗಣೇಶ, ಮಾಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಯಶೋಧ ಎನ್, ಆರ್.ಸಿ.ಎಚ್ ಡಾ.ನಂದಿತಾ, ಮಹಾತ್ವಕಾಂಕ್ಷಿ ಜಿಲ್ಲೆ ಯೋಜನೆಯ ಜಿಲ್ಲಾ ಸಂಯೋಜಕರಾದ ಯೂಸೂಫ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಶರಣಮ್ಮ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT