ರಾಯಚೂರು: ಬಾಲಕಾರ್ಮಿಕ ಪದ್ಧತಿಯು ಒಂದು ಸಾಮಾಜಿಕ ಪಿಡುಗಾಗಿದ್ದು ಇದರ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದರು.

ಇಲ್ಲಿಯ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲಾ ಇಲಾಖೆಗಳ ಸಹಕಾರ ಹಾಗೂ ಸಮನ್ವಯದ ಅಗತ್ಯವಿದೆ ಎಂದು ತಿಳಿಸಿದರು.

ಕಾರ್ಮಿಕ ಇಲಾಖೆ ಅಧಿಕಾರಿಗಳು ನಿಯಮಿತವಾಗಿ ತಪಾಸಣೆ ನಡೆಸಿ ಬಾಲಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿ ಕಲ್ಪಿಸಬೇಕು. ಗ್ಯಾರೇಜ್, ಕಾರ್ಖಾನೆ, ಹೋಟೆಲ್, ಅಂಗಡಿ, ಮತ್ತಿತರ ಅಪಾಯಕಾರಿ ಉದ್ಯೋಗದ ಸ್ಥಳಗಳಲ್ಲಿ ತಪಾಸಣೆ ಹೆಚ್ಚಿಸಬೇಕು ಎಂದು ಸೂಚನೆ ನೀಡಿದರು.

ತಪಾಸಣೆ ತೀವ್ರವಾದರೆ ಬಾಲ ಕಾರ್ಮಿಕರನ್ನು ಕೆಲಸದಲ್ಲಿ ತೊಡಗಿಸಿಕೊಳ್ಳಲು ಉದ್ಯೋಗದಾತರು ಹೆದರುತ್ತಾರೆ. ಪತ್ತೆ ಹಚ್ಚಿದ ಬಾಲ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಿ ಮುಖ್ಯವಾಹಿನಿಗೆ ತಂದರೆ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಬಾಲ ಕಾರ್ಮಿಕರ ನಿಷೇಧ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಮಕ್ಕಳು ಬಾಲ ಕಾರ್ಮಿಕರಾಗುವುದನ್ನು ತಪ್ಪಿಸಬಹುದು. ಇಲ್ಲವಾದರೆ ಮಕ್ಕಳು ಕೊನೆಯವರೆಗೂ ಕಾರ್ಮಿಕರಾಗಿಯೇ ಉಳಿದುಬಿಡುತ್ತಾರೆ ಎಂದು ತಿಳಿಸಿದರು.

ಬಾಲ್ಯ ವಿವಾಹ ಕಾಯ್ದೆ ಬಗ್ಗೆಯೂ ಜಾಗೃತಿ ಮೂಡಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಮಾತನಾಡಿ, ಪೊಲೀಸ್ ಇಲಾಖೆಯಿಂದ ಬಾಲಕಾರ್ಮಿಕರ ಪದ್ಧತಿ ನಿರ್ಮೂಲನೆಗೆ ಅಗತ್ಯ ಸಹಕಾರ ನೀಡಲಾಗುವುದು. ಜಿಲ್ಲೆಯ ಯಾವುದೇ ಠಾಣೆಯಲ್ಲಿ ಇಂತಹ ಪ್ರಕರಣಗಳನ್ನು ದಾಖಲಿಸಲು ಹಿಂದೇಟು ಹಾಕಿದಲ್ಲಿ, ತಕ್ಷಣ ನಮ್ಮ ಗಮನಕ್ಕೆ ತರಬೇಕು ಎಂದು ಹೇಳಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಹಂಪಣ್ಣ ಸಜ್ಜನ್, ಕಾರ್ಮಿಕ ಇಲಾಖೆಯ ಜಿಲ್ಲಾ ಅಧಿಕಾರಿ ಆರತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಪುಷ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಜುನಾಥ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-32-1777069813

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.