ರಾಯಚೂರು: ರಾಜ್ಯ ಸರ್ಕಾರ ಶಾಲಾ–ಕಾಲೇಜುಗಳಲ್ಲಿ ಜನಿವಾರ, ಶಿವದಾರ, ರುದ್ರಾಕ್ಷಿ ಹಿಜಾಬ್ಗೆ ಅವಕಾಶ ಎನ್ನುವ ನಿರ್ಧಾರ ಅಲ್ಪ ಸಂಖ್ಯಾತರ ಓಲೈಕೆಯ ಭಾಗವಾಗಿದೆ. 2028ರ ಚುನಾವಣೆಯ ತಾಲೀಮು ನಡೆಸಿರುವ ನೀತಿ ಸರಿಯಲ್ಲ ಎಂದು ಬಿಜೆಪಿ ನಗರ ಘಟಕದ ಉಪಾಧ್ಯಕ್ಷ ಪಲುಗುಲ ನಾಗರಾಜ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ಉಪ ಚುನಾವಣೆಯಲ್ಲಿ ಅಲ್ಪಸಂಖ್ಯಾತ ವರ್ಗ ತಿರುಗಿ ಬಿದ್ದ ಪರಿಣಾಮ ಮತ್ತು 2028ರ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಓಟುಗಳಿಗಾಗಿ ಇಂತಹ ನಿರ್ಧಾರ ತೆಗೆದುಕೊಂಡಿದೆ. ಮೊದಲ ಪದ ಹಿಜಾಬ್ ಆಗಬಾರದು ಎಂದು ಜನಿವಾರ, ಶಿವದಾರ, ರುದ್ರಾಕ್ಷಿ ಹೆಸರು ಪ್ರಸ್ತಾಪಿಸಿರುವುದು ಕಾಂಗ್ರೆಸ್ ಪಕ್ಷದ ಊಸರವಳ್ಳಿ ನೀತಿ ಎದ್ದು ಕಾಣಿಸುತ್ತಿದೆ ಎಂದು ಟೀಕಿಸಿದ್ದಾರೆ.

ಹಿಜಾಬ್ ವಿಚಾರ ಸುಪ್ರೀಂ ಕೋರ್ಟ್ ವ್ಯಾಪ್ತಿಯಲ್ಲಿರುವುದರಿಂದ ಅದು ಇತ್ಯರ್ಥ ಆಗದೆ ಸರ್ಕಾರದ ದಿಢೀರ್ ನಿರ್ಧಾರ ರಾಜ್ಯದಲ್ಲಿ ಕೋಮು ಸಂಘರ್ಷಕ್ಕೆ ದಾರಿ ಮಾಡಿ ಕೊಟ್ಟಂತಾಗುತ್ತದೆ. ಅಲ್ಪಸಂಖ್ಯಾತರ ಓಟುಗಳು ಕೈ ತಪ್ಪುವ ಭೀತಿಯಿಂದ ಕಾಂಗ್ರೆಸ್ ಇಂತಹ ನಿರ್ಧಾರಗಳಿಗೆ ಮುಂದಾಗಿರುವುದು ನಿಜಕ್ಕೂ ಆತಂಕಕಾರಿ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-32-456629559

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.