ರಾಯಚೂರು: ಜಿಲ್ಲೆಯ ಒಬ್ಬ ಶಾಸಕರಿಗಾದರೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಂಪುಟದಲ್ಲಿ ಮೊದಲ ಪಟ್ಟಿಯಲ್ಲೇ ಸಚಿವ ಸ್ಥಾನ ಸಿಗಲಿದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಜಿಲ್ಲೆಯ ಕಾಂಗ್ರೆಸ್ ಮುಖಂಡರ ಒಳಜಗಳದಿಂದ ಪಕ್ಷದ ಒಗ್ಗಟ್ಟು ದುರ್ಬಲಗೊಂಡಿದ್ದು, ಸಚಿವ ಸ್ಥಾನ ಪಡೆಯಲಾರದಂತಹ ಸ್ಥಿತಿ ನಿರ್ಮಾಣವಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಪರಿಶಿಷ್ಟರ ಕೋಟಾದಲ್ಲಿ ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ವಸಂತಕುಮಾರ ಹಾಗೂ ಲಿಂಗಾಯತ ಕೋಟಾದಲ್ಲಿ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಸಚಿವ ಸ್ಥಾನ ಸಿಗಬಹುದು ಎನ್ನುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೂ ನಿರಾಸೆ ಉಂಟಾಗಿದೆ. ಆದರೆ, ಎರಡನೇ ಪಟ್ಟಿಯಲ್ಲಿ ಇಬ್ಬರಲ್ಲಿ ಒಬ್ಬರಿಗೆ ಸಚಿವ ಸ್ಥಾನ ದೊರಕುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಪಕ್ಷದ ಮುಖಂಡರು ಆಡಿಕೊಳ್ಳುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮುಖಾಂತರವೇ ಸಚಿವ ಸ್ಥಾನ ಪಡೆಯಲು ಜಿಲ್ಲೆಯ ಮುಖಂಡರು ನಿರ್ಧರಿಸಿದ್ದಾರೆ.

ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ 4 ಸ್ಥಾನ ಪಡೆದಿರುವ ಜಿಲ್ಲೆಯ ಕಾಂಗ್ರೆಸ್ ಪಕ್ಷಕ್ಕೆ ಸಚಿವ ಸ್ಥಾನ ಪಡೆದುಕೊಳ್ಳಲು ಸಾಧ್ಯವಾಗಿಲ್ಲ. 2ನೇ ಹಂತದಲ್ಲಾದರೂ ಸಚಿವ ಸ್ಥಾನ ಪಡೆಯಬೇಕು ಎಂಬ ಆಸೆಗೆ ಸ್ವಪಕ್ಷೀಯರ ಭಿನ್ನಮತವು ತಣ್ಣೀರು ಎರಚಲಿದೆಯೇ ಎಂಬ ಚರ್ಚೆಯೂ ನಡೆಯುತ್ತಿದೆ.

ಸೇವಾ ಹಿರಿತನ, ಜಾತಿ ಲೆಕ್ಕಾಚಾರದಲ್ಲಿಯಾದರೂ ಜಿಲ್ಲೆಯ ಒಬ್ಬರಿಗಾದರೂ ಸಚಿವ ಸ್ಥಾನ ದೊರಕಿತೆನ್ನುವ ಒತ್ತಡ ಇದೆ. ಆದರೆ, ದೆಹಲಿ ಮಟ್ಟದಲ್ಲಿ ಸಂಘಟಿತ ಪ್ರಯತ್ನ ನಡೆದಿಲ್ಲ. ಜಿಲ್ಲೆಯಲ್ಲಿ ಹೈಕಮಾಂಡ್ ಮೇಲೆ ಪ್ರಭಾವ ಬೀರುವಂತಹ ಪ್ರಭಾವಿ ನಾಯಕರು ಇಲ್ಲದಿರುವುದು ಸಹ ರಾಜಕೀಯ ಹಿನ್ನಡೆಗೆ ಕಾರಣವಾಗಿದೆ.

ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಎನ್.ಎಸ್.ಬೋಸರಾಜು ಅವರು ವಿಧಾನ ಪರಿಷತ್ ಸದಸ್ಯರಾಗಿ ಸಚಿವರಾಗಿದ್ದರು. ಆದರೆ, ಕೊನೆಯವರೆಗೂ ಅವರಿಗೆ ಜಿಲ್ಲಾ ಉಸ್ತುವಾರಿಯ ಹೊಣೆ ಕೊಡಲೇ ಇಲ್ಲ. ಕಲಬುರಗಿ ಜಿಲ್ಲೆಯ ಶರಣಪ್ರಕಾಶ ಪಾಟೀಲ ಅವರನ್ನು ಜಿಲ್ಲಾ ಉಸ್ತುವಾರಿ ಮಾಡಿದ್ದು, ಜಿಲ್ಲೆಯ ಪ್ರಗತಿಗೆ ಪೂರಕವಾಗಲೇ ಇಲ್ಲ.

ಜಿಲ್ಲಾ ಉಸ್ತುವಾರಿ ಬದಲಿಸುವಂತೆ ಕಾಂಗ್ರೆಸ್ನ ನರಸಿಂಹಲು ಮಾಡಗೇರಿ ಸೇರಿದಂತೆ ವಿವಿಧ ಸಂಘಟನೆಗಳು ಪಕ್ಷದ ಮೇಲೆ ಒತ್ತಡ ಹಾಕಿದರೂ ಪ್ರಯೋಜನವಾಗಲಿಲ್ಲ. ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ ಹಾಗೂ ಗ್ರಾಮೀಣ ಶಾಸಕ ದದ್ದಲ ಬಸನಗೌಡರು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಮೊದಲ ಪಟ್ಟಿ ಅವರಿಗೂ ನಿರಾಸೆ ತಂದಿದೆ. ಎರಡನೇ ಪಟ್ಟಿಯಲ್ಲಾದರೂ ಸ್ಥಾನ ದೊರಕಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.

‘ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕಾದರೆ ಜಿಲ್ಲೆಯ ಒಬ್ಬರಿಗಾದರೂ ಸಚಿವ ಸ್ಥಾನ ನೀಡಲೇಬೇಕು. 2ನೇ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯ ಒಬ್ಬರಿಗಾದರೂ ಸಚಿವ ಸ್ಥಾನ ಸಿಗಲಿದೆ. ಪಕ್ಷದ ಹೈಕಮಾಂಡ್ ಮೇಲೆ ಸಂಪೂರ್ಣ ವಿಶ್ವಾಸವಿದೆ’ ಎನ್ನುತ್ತಾರೆ ಕೆಪಿಸಿಸಿ ವಕ್ತಾರ ರಜಾಕ್ ಉಸ್ತಾದ್.

‘ಜಿಲ್ಲೆಗೆ ಒಂದು ಸಚಿವ ಸ್ಥಾನವನ್ನಾದರೂ ಕೊಡಬೇಕು ಎಂದು ಒತ್ತಾಯಿಸಿ ಹೈಕಮಾಂಡ್ಗೆ ಲಿಖಿತವಾಗಿಯೇ ಮನವಿ ಮಾಡಿದ್ದೇವೆ. ಮೊದಲ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯ ಶಾಸಕರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಎರಡನೇ ಪಟ್ಟಿಯಲ್ಲಿ ಸಿಗಬಹುದು ಎನ್ನುವ ನಿರೀಕ್ಷೆಯಲ್ಲಿ ಇದ್ದೇವೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ ಹೇಳುತ್ತಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-32-188745858

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.