ರಾಯಚೂರು: ‘ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ.ವಸಂತಕುಮಾರ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್ ಮುಖಂಡ ನರಸಿಂಹಲು ಮಾಡಗಿರಿ ವಿರುದ್ಧ ತಕ್ಷಣ ಶಿಸ್ತು ಕ್ರಮ ಕೈಗೊಂಡು ಪಕ್ಷದಿಂದ ಉಚ್ಚಾಟಿಸಬೇಕು’ ಎಂದು ಕಾಂಗ್ರೆಸ್ನ ಜಿಲ್ಲಾ ಘಟಕದ ಕಾರ್ಯದರ್ಶಿ ಅಂಜಿನಕುಮಾರ ಒತ್ತಾಯಿಸಿದರು.

ನರಸಿಂಹಲು ಮಾಡಗಿರಿ ಅವರು ಸ್ವ–ಪಕ್ಷಿಯ ಸರ್ಕಾರದ ಸಚಿವರು ಮತ್ತು ಪಕ್ಷದ ನಾಯಕರ ವಿರುದ್ಧವೇ ಪತ್ರಿಕಾಗೋಷ್ಠಿ ನಡೆಸಿ, ಇಲ್ಲಸಲ್ಲದ ಆರೋಪ ಮಾಡಿರುವುದು ಖಂಡನೀಯ ಎಂದು ಸೋಮವಾರ ಮಾಧ್ಯಮ ಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಈ ರೀತಿಯ ನಡೆ ಸಂಪೂರ್ಣವಾಗಿ ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ ಅವರು ತಕ್ಷಣ ಕ್ರಮ ಕೈಗೊಂಡು ಮಾಡಗಿರಿ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿದರು.

ನರಸಿಂಹಲು ಮಾಡಗಿರಿ ಅವರು ಕೇವಲ ಪ್ರಚಾರಕ್ಕಾಗಿ ಪಕ್ಷದ ನಾಯಕರ ವಿರುದ್ಧ ಆರೋಪ ಮಾಡುತ್ತಿದ್ದಾರೆ. ನಾಲ್ಕು ಬಾರಿ ನಗರಸಭೆ ಚುನಾವಣೆಯಲ್ಲಿ ಸೋತಿದ್ದ ಅವರ ಪತ್ನಿಗೆ ಕಾಂಗ್ರೆಸ್ ಟಿಕೆಟ್ ನೀಡಿ ಸದಸ್ಯರು ಹಾಗೂ ಅಧ್ಯಕ್ಷರನ್ನಾಗಿ ಮಾಡಲು ಎ.ವಸಂತಕುಮಾರ ಕಾರಣರಾಗಿದ್ದರು. ಈಗ ಅವರ ವಿರುದ್ಧವೇ ಮಾತನಾಡುತ್ತಿರುವುದು ದ್ರೋಹದ ಕೆಲಸ ಎಂದು ಟೀಕಿಸಿದರು.

ಒಳಚರಂಡಿ ಯೋಜನೆಗೆ ಬಿಡುಗಡೆಯಾದ ₹40 ಕೋಟಿ ಅನುದಾನವು ಯಾವುದೇ ವೈಯಕ್ತಿಕ ಶಿಫಾರಸಿನಿಂದ ಬಂದಿದ್ದಲ್ಲ, ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ನೀಡಿರುವ ಸಾಮಾನ್ಯ ಅನುದಾನವಾಗಿದೆ ಎಂದು ಸ್ಪಷ್ಟಪಡಿಸಿದರು.

ಸಚಿವರು ನಗರಸಭೆಗೆ ಭೇಟಿ ನೀಡಿಲ್ಲ ಎಂದು ಆರೋಪಿಸುವ ನರಸಿಂಹಲು ಮಾಡಗಿರಿ ಅವರು, ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿ ಎಷ್ಟು ಬಾರಿ ಸಚಿವರನ್ನು ಭೇಟಿ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

2024ರಲ್ಲಿಯೇ ಹರಿಜನವಾಡದ ಡಾ.ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೆ ₹5 ಕೋಟಿ ನೀಡುವಂತೆ ಎ.ವಸಂತಕುಮಾರ ಅವರು ಸಮಾಜ ಕಲ್ಯಾಣ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಇಷ್ಟೆಲ್ಲ ಅಭಿವೃದ್ಧಿ ಕೆಲಸಗಳ ನಡುವೆಯೂ ಜನರನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ ಎಂದು ದೂರಿದರು.

ನಗರಸಭೆ ಮಾಜಿ ಸದಸ್ಯ ಜಿ.ಮಾರೆಪ್ಪ ಮಾತನಾಡಿ,‘ಹರಿಜನವಾಡದಲ್ಲಿ ಭವನ ನಿರ್ಮಾಣಕ್ಕೆ ಜಾಗ ಕಾಯ್ದಿರಿಸಿದ್ದೇ ದಿವಂಗತ ಆರ್.ಆಂಜನೇಯ. ನರಸಿಂಹಲು ಮಾಡಗಿರಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತಂದು ಅಧಿಕಾರ ನೀಡಿದವರೇ ವಸಂತಕುಮಾರ ಆಗಿದ್ದಾರೆ. ಅವರ ವಿರುದ್ಧ ಸುಳ್ಳು ಆರೋಪ ಮಾಡುವುದು ಸರಿಯಲ್ಲ’ ಎಂದು ಆಕ್ರೋಶ ಹೊರಹಾಕಿದರು.

ಮುಖಂಡ ಚಂದ್ರಶೇಖರ ಮಾತನಾಡಿ,‘ಸಾಮಾನ್ಯ ಕಾರ್ಯಕರ್ತರಾಗಿದ್ದ ನರಸಿಂಹಲು ಅವರಿಗೆ ಮೂರು ಬಾರಿ ಕಾಂಗ್ರೆಸ್ ಟಿಕೆಟ್ ಕೊಡಿಸಿದ್ದು ಎ.ವಸಂತಕುಮಾರ. ನಾಲ್ಕನೇ ಬಾರಿ ಅವರ ಪತ್ನಿಗೆ ಟಿಕೆಟ್ ನೀಡಿ ಸದಸ್ಯರನ್ನಾಗಿ ಹಾಗೂ ಅಧ್ಯಕ್ಷರನ್ನಾಗಿ ಮಾಡಿದ್ದು ಕೂಡ ಅವರೇ’ ಎಂದು ಹೇಳಿದರು.

ಮಾಜಿ ಸದಸ್ಯ ಜಿ.ತಿಮ್ಮಪ್ಪ ಮಾತನಾಡಿದರು. ಈರಣ್ಣ ಭಂಡಾರಿ, ಅಶಣ್ಣ, ಜಿ.ಸತ್ಯನಾಥ, ಗೋವಿಂದ, ಮಲ್ಲಿಕಾರ್ಜುನ, ನಾಗರಾಜ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-32-1509284475

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.