ರಾಯಚೂರು: ‘ಮುಸ್ಲಿಮರಿಗೆ ಕುರಾನ್, ಕ್ರೈಸ್ತರಿಗೆ ಬೈಬಲ್, ಹಿಂದೂಗಳಿಗೆ ರಾಮಾಯಣ ಧರ್ಮ ಗ್ರಂಥವಾಗಿದೆ. ಆದರೆ, ಇಡೀ ದೇಶಕ್ಕೆ ಪವಿತ್ರ ಗ್ರಂಥ ಸಂವಿಧಾನ’ ಎಂದು ನಗರ ಶಾಸಕ ಡಾ.ಶಿವರಾಜ ಪಾಟೀಲ ಬಣ್ಣಿಸಿದರು.

ಇಲ್ಲಿಯ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನದಿಂದಾಗಿಯೇ ದೇಶದಲ್ಲಿ ಶಾಂತಿ ಹಾಗೂ ಸಮೃದ್ಧಿ ನೆಲೆಯೂರಿದೆ’ ಎಂದು ತಿಳಿಸಿದರು.

‘ಬಾಬಾ ಸಾಹೇಬರು ಶಿಕ್ಷಣದಿಂದಾಗಿ ಪ್ರಗತಿ ಸಾಧಿಸಿದರು. ಅವರು ಒಬ್ಬರೇ 32 ಪದವಿಗಳನ್ನು ಪಡೆದಿದ್ದರು. ಅನೇಕ ಸಂಶೋಧನಾ ಪ್ರಬಂಧಗಳನ್ನು ಬರೆದಿದ್ದಾರೆ. ತಳ ಸಮುದಾಯವರು ಶಿಕ್ಷಣದ ಮಹತ್ವ ಅರಿತುಕೊಳ್ಳಬೇಕು. ಚೆನ್ನಾಗಿ ಓದಿ ಬದುಕಿನಲ್ಲಿ ಸಾಧನೆ ಮಾಡಬೇಕು’ ಎಂದು ಸಲಹೆ ನೀಡಿದರು.

ಪ್ರಭಾರ ಜಿಲ್ಲಾಧಿಕಾರಿ ಆದ ಜಿಲ್ಲಾ ಪಂಚಾಯಿಸಿ ಸಿಇಒ ಈಶ್ವರಕುಮಾರ ಕಾಂದೂ ಮಾತನಾಡಿ, ‘ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರಪಂಚದ ಅನೇಕ ಸಂವಿಧಾನಗಳನ್ನು ಅಧ್ಯಯನ ಮಾಡಿದ್ದರು. ಕಾನೂನು, ಆರ್ಥಿಕ ವಿಷಯಗಳಲ್ಲಿ ಪರಿಣಿತರಾಗಿದ್ದರು’ ಎಂದು ಹೇಳಿದರು.

‘ನಮ್ಮ ಬಳಿ ಎರಡು ರೂಪಾಯಿ ಇದ್ದರೆ ಒಂದು ರೂಪಾಯಿಯನ್ನು ಊಟಕ್ಕೆ ಬಳಸಿಕೊಳ್ಳಬೇಕು. ಇನ್ನೊಂದು ರೂಪಾಯಿಯಲ್ಲಿ ಪುಸ್ತಕ ಕೊಂಡುಕೊಂಡು ಜ್ಞಾನ ವೃದ್ಧಿಸಿಕೊಳ್ಳಬೇಕು’ ಎಂದರು.

ಕುಪ್ಪಳ್ಳಿಯ ಕುವೆಂಪು ಕನ್ನಡ ಅಧ್ಯಯನ ಪೀಠದ ನಿರ್ದೇಶಕ ಬಿ.ಎಂ.ಪುಟ್ಟಯ್ಯ ಮಾತನಾಡಿ, ‘ಡಾ.ಅಂಬೇಡ್ಕರ್ ಹೆಸರಲ್ಲಿರುವ ಎಲ್ಲ ಸಂಶೋಧನಾ ಹಾಗೂ ಅಧ್ಯಯನ ಕೇಂದ್ರಗಳ ಹೆಸರು ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಎಂದು ಮರು ನಾಮಕರಣ ಮಾಡಬೇಕು’ ಎಂದು ಹೇಳಿದರು.

‘ಬಾಬಾಸಾಹೇಬರು ಸಂವಿಧಾನದ ಮೂಲಕ ದೇಶದ ಪ್ರತಿಯೊಬ್ಬ ಜನ ಸಮುದಾಯದ ವ್ಯಕ್ತಿಗೆ ಸಮಾನತೆ ಕಲ್ಪಿಸಿದ್ದಾರೆ. ಘನತೆಯಿಂದ ಬಾಳುವ ಹಕ್ಕನ್ನು ಒದಗಿಸಿದ್ದಾರೆ. ಅವರಂಥ ಮಹಾನ್ ವ್ಯಕ್ತಿ ಮುಂದೆಂದೂ ಜನಸಿ ಬರಲು ಸಾಧ್ಯವಿಲ್ಲ’ ಎಂದು ಅವರು ಹೇಳಿದರು.

ಬೀದರ್ ಬುದ್ಧ ವಿಹಾರದ ಬಂತೇಜಿ ಯಾಕತ್ನೂರ್ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಉಪ ವಿಭಾಗಾಧಿಕಾರಿ ಹಂಪಣ್ಣ ಸಜ್ಜನ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಮುಖ್ಯ ಲೆಕ್ಕಾಧಿಕಾರಿ ವಿಜಯಶಂಕರ, ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮಾ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣ ಶಾವಂತಗೇರಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರವೀಣಕುಮಾರ, ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಜೇಂದ್ರ ಜಲ್ದಾರ್ ಅವರು ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರವೀಣಕುಮಾರ ಸ್ವಾಗತಿಸಿದರು. ಮುರಳೀಧರ ಕುಲಕರ್ಣಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-32-1479681265

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.